Breaking News

ಹುಟುಕಮನೆ ಗುಡ್ಡ ನೆಲಸಮ ಪ್ರಕರಣ ಸ್ಯಾಟಲೈಟ್ ಚಿತ್ರ ಪತ್ರಿಕೆಗೆ ಬಿಡುಗಡೆಗೊಳಿಸುವಂತೆ ದೂರುದಾರ ಮಂಜುನಾಥ ಹೆಗಡೆ ಆಗ್ರಹ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಜಿಲ್ಲೆಯಲ್ಲಿ ಸದ್ದು ಮಾಡಿದ ಯಲ್ಲಾಪುರ ತಾಲೂಕು ಇಂಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ ಹುಟುಕಮನೆ ಗುಡ್ಡ ನೆಲಸಮ ಪ್ರಕರಣ ಬಗೆಹರಿಯದೆ ಕಗ್ಗಂಟಾಗುತ್ತಲೆ ಸಾಗಿದೆ.


ಈ ಮೊದಲು ಈ ಪ್ರದೇಶದಲ್ಲಿ ಕೇವಲ ಗೇರು ಗಿಡಗಳಿದ್ದವೇ ಹೊರತು ಮರಗಳಿರಲಿಲ್ಲ ಎಂಬುದು ಇಡಗುಂದಿ ವಲಯ ಅರಣ್ಯಾಧಿಕಾರಿ ಎಮ್.ಹೆಚ್.ನಾಯ್ಕ್ ಅವರ ಹೆಳಿಕೆಯಾಗಿದ್ದು ಅಲ್ಲಿನ ಕಾಮಗಾರಿ ಮುನ್ನದ ಸ್ಯಾಟಲೈಟ್ ಚಿತ್ರಗಳು ಲಭ್ಯವಿದೆ ಎನ್ನುತ್ತಿರುವ ಕುರಿತು ಪ್ರಕರಣದ ದೂರುದಾರ ಮಂಜುನಾಥ ಹೆಗಡೆ ತೀವ್ರ ಅಸಮದಾನ ವ್ಯಕ್ತ ಪಡಿಸಿದ್ದು ಅಧಿಕಾರಿ ಸುಳ್ಳು ಹೇಳುತ್ತಿದ್ದು ಸತ್ಯ ಸಾಭೀತಾಗಲಿ ಎಂದು ಆಗ್ರಹಿಸಿದ್ದಾರೆ.

ಅವರೇ ಹೇಳಿದಂತೆ ಗುಡ್ಡ ತೆರವಿಗು ಮುನ್ನದ 4 ಎಕರೆ ಮಾಲ್ಕಿ ಮತ್ತು 2 ಎಕರೆ ಅರಣ್ಯ ಜಾಗದ ಸ್ಯಾಟಲೈಟ್ ಚಿತ್ರಗಳನ್ನು ಪತ್ರಿಕೆಗಳಿಗೆ ಬಿಡುಗಡೆಗೊಳಿಸಿ ಸಾರ್ವಜನಿಕವಾಗಿ ಬಹಿರಂಗ ಪಡಿಸಲಿ ಎಂದು ಆಗ್ರಹಿಸಿ ಮಾದ್ಯಮ ಹೇಳಿಕೆ ನೀಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *