
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಪ್ರದೇಶ ಕಾಂಗ್ರೆಸ್ ಸಮಿತಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಇಡಗುಂದಿಯ ಪ್ರೇಮಾನಂದ ನಾಯ್ಕ ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆಧೇಶ ಹೊರಡಿಸಿದೆ.

ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮೋದನೆ ಹಾಗು ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಸ್. ಮಧು ಬಂಗಾರಪ್ಪ ಮತ್ತು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವ್ಕರ್ ಹಾಗು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಬಾಲಚಂದ್ರ ಮಾದೇವ ನಾಯ್ಕ ನೇಮಕಾತಿ ಪತ್ರ ರವಾನಿಸಿದ್ದಾರೆ.

ಆಯ್ಕೆಯಾದ ಪ್ರೇಮಾನಂದ ನಾಯ್ಕ ಅವರನ್ನು ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅಭಿನಂದಿಸಿದ್ದಾರೆ.




