Breaking News

12 ಅಡಿ ಉದ್ದದ ಕಾಳಿಂಗ ಸರ್ಪ ಸುರಕ್ಷಿತವಾಗಿ ಕಾಡಿಗೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಯಲ್ಲಾಪುರ: ತಾಲೂಕಿನ ಬಿಳಕಿ ಸಮೀಪದ ಬಸವನಗುಂಡಿ ಬಳಿ ಕಾಣಿಸಿಕೊಂಡ ಕಾಳಿಂಗ ಸರ್ಪವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.


ಬಿಳಕಿ ಬಳಿಯ ಬಸವನಗುಂಡಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲಿ ಒಣಗಿದ ಮರದ ಪೊಟರೆಯೊಂದರಲ್ಲಿ ಕಳೆದ 15 ದಿವಸಗಳಿಂದ ಕಾಳಿಂಗ ಸರ್ಪ ವಾಸವಾಗಿತ್ತು. ಸ್ಥಳೀಯ ರೈತರು ಹೊಲದತ್ತ ಹೋಗಲು ಭಯಪಡುವಂತಾಗಿತ್ತು.ನಿಮ್ಮ


ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಶಿರಸಿಯ ಉರಗಪ್ರೇಮಿ ಸೈಯ್ಯದ್ ಅವರನ್ನು ಕರೆಸಿ, ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು, ಸುರಕ್ಷಿತವಾಗಿ ಕಾಡಿಗೆ ಬಿಟ್ಟರು.


ಡಿಸಿಎಫ್ ಎಸ್.ಜಿ.ಹೆಗಡೆ, ಎಸಿಎಫ್ ಹಿಮವತಿ ಭಟ್ಟ ಅವರ ಮಾರ್ಗದರ್ಶನದಲ್ಲಿ ಆರ್.ಎಫ್.ಒಗಳಾದ ಅಮಿತ್ ಚೌಹಾಣ, ಶಿಲ್ಪಾ ನಾಯ್ಕ, ಡಿ.ಆರ್.ಎಫ್.ಒ ಮಂಜುನಾಥ ಆಗೇರ, ಅರಣ್ಯ ರಕ್ಷಕರಾದ ಗಣೇಶ ಪವಾರ, ವನ್ಯಜೀವಿ ಸಂಶೋಧನಾ ತಂಡದ ರವಿ ಯಲ್ಲಾಪುರ, ಅಜಿಂಕ್ಯಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *