Breaking News

ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ಸೌಹಾರ್ಧತೆಯ ಮಾನವ ಸರಪಳಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ಸಂಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತರಿಂದ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಸೌಹಾರ್ಧತೆಯ ಸಂದೇಶ ಸಾರಲು ಮಾನವ ಸರಪಳಿ ನಿರ್ಮಿಸಲಾಗಿತ್ತು.


ನೂರಾರು ಅಂಗನವಾಡಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಗಾಂಧೀಜಿಯವರ ಹೆಸರಿನಲ್ಲಿ ಹುತಾತ್ಮರಾದ ಯೋಧರು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕೆ ಅನ್ನ ನೀಡಿದ ರೈತರು, ಅಕ್ಷರ ಜ್ಞಾನ ನೀಡಿದ ಶಿಕ್ಷಕರು, ದೇಶ ಕಟ್ಟುವ ಕಾರ್ಮಿಕರು ಇತ್ಯಾದಿ ಕ್ಷೇತ್ರದಲ್ಲಿ ಸೇವೆಸಲ್ಲಿಸಿ ಹುತಾತ್ಮರಾದ ಸರ್ವರಿಗು ಗೌರವ ಸಲ್ಲಿಕೆಗೆ ಮಾನವ ಸರಪಳಿ ನಿರ್ಮಿಸಿ ಸೌಹಾರ್ದ ಸಂದೇಶ ಸಾರಲಾಯಿತು.


ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಲಲಿತಾ ಹೆಗಡೆ, ಕಾರ್ಯದರ್ಶಿ ಲಕ್ಷ್ಮೀ ಆರ್ ಸಿದ್ದಿ, ಖಜಾಂಚಿ ಗೌರಿ ಮರಾಠಿ ಹಾಗು ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *