Breaking News

ಮಾವಿನಕಟ್ಟಾದ ತರಕಾರಿ ಅಂಗಡಿಯಲ್ಲಿ ಮಲಗಿದ್ದಾಕೆಗೆ ಹಾವು ಕಡಿದು ಸಾವು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಮಾವಿನಕಟ್ಟಾದಲ್ಲಿ ತರಕಾರಿ ಅಂಗಡಿಯೊಳಗೆ ಮಲಗಿದ್ದಾಕೆಗೆ ನಾಗರ ಹಾವು ಕಡಿದಿದ್ದು ಚಿಕಿತ್ಸೆಗಾಗಿ ಶಿರಸಿ ಪಂಡಿತ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.


ಯಮುನಾ ಸುರೇಶ್ ಸಿದ್ದಿ (32 ) ಎಂಬಾಕೆಯೆ ಸಾವು ಕಂಡ ದುರ್ದೈವಿಯಾಗಿದ್ದು ಮಂಗಳವಾರ ಮಾವಿನಕಟ್ಟದಲ್ಲಿರುವ ತನ್ನ ತರಕಾರಿ ಅಂಗಡಿಯೊಳಗೆ ಮಲಗಿದ್ದ ವೇಳೆ ನಾಗರ ಹಾವು ಕಚ್ಚಿದೆ. ವಿಷಯ ತಿಳಿದ ಸ್ಥಳೀಯ ಗ್ರಾಮಸ್ಥರು ಚಿಕಿತ್ಸೆಗಾಗಿ ಮಂಚಿಕೇರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಶಿರಸಿ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ ಹಿನ್ನೆಲೆಯಲ್ಲಿ ತಕ್ಷಣ ಶಿರಸಿ ಪಂಡಿತ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ದುರಾದೃಷ್ಟವಶಾತ್ ಆಸ್ಪತ್ರೆ ತಲುಪುವ ಮಾರ್ಗಮದ್ಯೆ ಆಕೆಯ ಪ್ರಾಣಪಕ್ಷಿ ಹಾರಿಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ
ಈ ಸಂಬಂಧ ಯಲ್ಲಾಪುರ ಠಾಣೆಗೆ ಮಾಹಿತಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *