Breaking News

ಯಲ್ಲಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಾಧನೆ ಎಸ್.ಎಸ್.ಎಲ್.ಸಿ ಫಲಿತಾಂಶ100%

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ತಾಲೂಕಿನ ಏಕೈಕ ವಸತಿಶಾಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್.ಎಸ್.ಎಲ್.ಸಿಯಲ್ಲಿ ಶೇ.1೦೦ ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಕುಳಿತ 39 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದು 18 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲೂ 21 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲೂ ಉತ್ತೀರ್ಣರಾಗಿದ್ದಾರೆ.


ಮೇಘಾ ವಿಶ್ವನಾಥ ಮರಾಠಿ 625ಕ್ಕೆ 619(99.04) ಅಂಕಗಳೊಂದಿಗೆ ರಾಜ್ಯಕ್ಕೆ 7 ನೇ ರ‍್ಯಾಂಕ್ ಹಾಗೂ ಶಾಲೆಗೆ ಪ್ರಥಮ, ಗೌತಮ ರಾಜು ನಾಯ್ಕ 625 ಕ್ಕೆ 608(97.28) ಅಂಕಗಳೊಂದಿಗೆ ದ್ವಿತೀಯ, ಯೋಗಿನಿ ಸತೀಶ ನಾಯ್ಕ 625ಕ್ಕೆ 602(96.32) ಅಂಕಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಸಕ ಶಿವರಾಮ ಹೆಬ್ಬಾರ್, ಎಂ.ಎಲ್.ಸಿ ಶಾಂತಾರಾಂ ಸಿದ್ದಿ, ಬಿಇಒ ಎನ್.ಆರ್ ಹೆಗಡೆ, ಶಾಲೆಯ ಪ್ರಾಂಶುಪಾಲ ಸಂಜಯ ನಾಯಕ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂಇದಗಳು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *