Breaking News

2026-27 ಸಾಲಿನ ಜಿಲ್ಲಾ ಮತ್ತು ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ರಾಜ್ಯ ಮಟ್ಟದ ಉತ್ತಮ ಶಿಕ್ಷಕರಾಗಿ-ರಾಮಚಂದ್ರ ಐ ನಾಯ್ಕ್ ಆಯ್ಕೆ.


ಪ್ರತಿಧ್ವನಿ ಯಲ್ಲಾಪುರ – 2026-27 ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು ಈ ಬಾರಿ ಶೈಕ್ಷಣಿಕ ಸೇವೆಯೊಂದಿಗೆ ಸಾಮಾಜಿಕ ಕಳಕಳಿ ಉಳ್ಳ ಬಡವರ ಶಿಕ್ಷಕರೆಂದೇ ಖ್ಯಾತರಾದ ರಾಮಾಪುರ ಶಾಲೆಯ ಪದೋನ್ನತ ಮುಖ್ಯ ಶಿಕ್ಷಕ ರಾಮಚಂದ್ರ ಐ ನಾಯ್ಕ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಾಗಿ ಆನಗೋಡು ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಮಾರುತಿ ಆಚಾರಿ, ಶಿರನಾಲ ಸಹ ಶಿಕ್ಷಕ ಸತೀಶ್ ಶೆಟ್ಟಿ ಹಾಗು ಪ್ರೌಢಶಾಲಾ ವಿಭಾಗದಲ್ಲಿ ಕಿರವತ್ತಿ ಕೆಪಿಎಸ್ ಪ್ರೌಢಶಾಲೆ ಸಹ ಶಿಕ್ಷಕ ನಾಗರಾಜ್ ನಾಯ್ಕ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ ವಿಭಾಗದಲ್ಲಿ ಮಂಗನತಾವರಗೇರಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ದೀಪಾ ಶೆಟ್ಟಿ,ಕನ್ನಡಗಲ್ ಸಹ ಶಿಕ್ಷಕಿ ಶೋಭಾ ನಾಯ್ಕ್, ಹುಟಕಮನೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಸುಭ್ರಾಯ ಭಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪ್ರೌಢಶಾಲಾ ವಿಭಾಗದ ಶಿಕ್ಷಕರು ನಂದೊಳ್ಳಿ ಶಾಲೆ ಸಹ ಶಿಕ್ಷಕಿ ಅರ್ಚನ, ಯಲ್ಲಾಪುರದ ಹೊಲಿ ರೋಜರಿ ಶಾಲೆ ಸಹ ಶಿಕ್ಷಕ ವೆಂಕಟರಮಣ ಭಟ್ ಆಯ್ಕೆಯಾಗಿದ್ದು ಪ್ರಶಸ್ತಿಗೆ ಭಾಜನರಾಗಿದ್ದಾರೆ.


ದಿನಾಂಕ 5 ರಂದು ಯಲ್ಲಾಪುರದ ವೇದವ್ಯಾಸ ಕಲ್ಯಾಣ ಮಂಠಪದಲ್ಲಿ ಜರುಗುವ ಶಿಕ್ಷಕ ದಿನಾಚರಣೆ ಗುರು ಗೌರವಾರ್ಪಣ ಸಮಾರಂಭದಲ್ಲಿ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ವಿವಿಧ ಗಣ್ಯರು ಹಾಗು ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಜರುಗಲಿದೆ ಎಂದು ಯಲ್ಲಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಮಾದ್ಯಮ ಪ್ರಕಟಣೆ ಹೋರಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಸೆ,6 ರಂದು ಯಲ್ಲಾಪುರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಹಾಗು “ಉತ್ತಮ ಸೇವಾ ಸಂಸ್ಥೆ”, “ಕಾಯಕ ರತ್ನ” ಪ್ರಶಸ್ತಿ ಪ್ರಧಾನ ಸಮಾರಂಭ.

ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ರಾಜ್ಯ ಸರ್ಕಾರದ ನೌಕರರ ಸಂಘ ಹಾಗೂ ಸಾಹಿತ್ಯ ಪರಿಷತ್ತು, ಬೆಂಗಳೂರು – ಉತ್ತರ ಕನ್ನಡ …

Leave a Reply

Your email address will not be published. Required fields are marked *