Breaking News

ರಾಜೀವ್ ಗಾಂಧಿ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಯಲ್ಲಾಪುರದ ವೈಟಿಎಸ್ಎಸ್ ಉಪನ್ಯಾಸಕಿ ಅಶ್ವಿನಿ. ಕೆ ಆಯ್ಕೆ.


ಪ್ರತಿಧ್ವನಿ ಯಲ್ಲಾಪುರ : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಯಲ್ಲಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ವೈಟಿಎಸ್ಎಸ್ ನ ಕಾಲೇಜು ಉಪನ್ಯಾಸಕಿ ಅಶ್ವಿನಿ. ಕೆ ಅವರು ಆಯ್ಕೆಯಾಗಿದ್ದು ಸೆ,5 ರಂದು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಭಾರತ್ ಜೋಡೋ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ್ ಅದೇಶ ಪತ್ರದಲ್ಲಿ ತಿಳಿಸಿದ್ದಾರೆ.


ಅಶ್ವಿನಿ.ಕೆ ಅವರು ಯಲ್ಲಾಪುರ ತಾಲೂಕಿನ ಪ್ರತಿಷ್ಟಿತ ವಿದ್ಯಾ ಸಂಸ್ಥೆ ಎಂದೇ ಹೆಸರಾದ ವೈಟಿಎಸ್ಎಸ್ ಕಾಲೇಜು ಇಂಗ್ಲೀಷ್ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಈಗಾಗಲೆ  ಅಂತರಾಷ್ಟ್ರೀಯ ಮಾನವ ಅಭಿವೃದ್ಧಿ ಸಮಿತಿಯು ನೀಡುವ “ರಾಷ್ಟ್ರೀಯ ರತ್ನ” ಪ್ರಶಸ್ತಿ ಪಡೆದಿದ್ದಾರೆ. ಇತ್ತೀಚೆಗೆ ” “ಗ್ಲೋಬಲ್ ಅಮೇರಿಕನ್ ಎನ್ವಿರಾನ್ಮೆಂಟಲ್ ವಿಶ್ವ ವಿದ್ಯಾಲಯ” ದಿಂದ ಗೌರವ ಡಾಕ್ಟರೇಟ್ ಪದವಿಗೆ ನಾಮಕರಣಗೊಂಡಿರುತ್ತಾರೆ.


ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಾರ್ಟಿ ಅಡಿಯಲ್ಲಿ ಶಿಕ್ಷಕ ಘಟಕದ ವತಿಯಿಂದ ನೀಡಲಾಗುವ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹೆಸರಿನ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತಾರಾಮ್ ಸಿದ್ದಿ, ಸಂಕಲ್ಪ ಸಂಸ್ಥೆ ಪ್ರಮೋದ್ ಹೆಗಡೆ, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ, ಸಾಮಾಜಿಕ ಕಾರ್ಯಕರ್ತ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಸಹ ಕಾರ್ಯದರ್ಶಿ ಬಾಲಕೃಷ್ಣ ನಾಯಕ್, ಸಂಸ್ಥೆ ಅಧ್ಯಕ್ಷ ರವಿ ಕುಮಾರ್ ಲಕ್ಷ್ಮಣ ಶಾನಬಾಗ್, ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಬಲವಂತ ಭಟ್ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು, ಪ್ರಾಂಶುಪಾಲರು, ಭೋದಕ,ಭೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗು ಕುಟುಂಬದವರು ಹಿತೈಷಿಗಳು ಊರ ನಾಗರಿಕರು ಶುಭ ಹಾರೈಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಸೆ,6 ರಂದು ಯಲ್ಲಾಪುರದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಹಾಗು “ಉತ್ತಮ ಸೇವಾ ಸಂಸ್ಥೆ”, “ಕಾಯಕ ರತ್ನ” ಪ್ರಶಸ್ತಿ ಪ್ರಧಾನ ಸಮಾರಂಭ.

ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ರಾಜ್ಯ ಸರ್ಕಾರದ ನೌಕರರ ಸಂಘ ಹಾಗೂ ಸಾಹಿತ್ಯ ಪರಿಷತ್ತು, ಬೆಂಗಳೂರು – ಉತ್ತರ ಕನ್ನಡ …

Leave a Reply

Your email address will not be published. Required fields are marked *