Breaking News

ಯಲ್ಲಾಪುರ ತಾಲೂಕು ನಾಮಧಾರಿ ಸಮಾಜದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ


ಪ್ರತಿಧ್ವನಿ ಯಲ್ಲಾಪುರ – ನಾಮಧಾರಿ ಸಮಾಜದ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸದ ಪ್ರೋತ್ಸಾಹಿಸುವ ಸಲುವಾಗಿ ಪ್ರತಿ ವರ್ಷ ಗೌರವಿಸುವಂತೆ ಈ ವರ್ಷವು ಯಲ್ಲಾಪುರ ತಾಲೂಕಿನ ನಾಮಧಾರಿ ಕುಟುಂಬದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳಲ್ಲಿ ಶೇಕಡಾ 90 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಾಮಧಾರಿ ಸಮಾಜ ಬಾಂಧವರು ಮತ್ತು ಶ್ರೀ ಗುರು ಸಹಕಾರ ಸಂಘದ ಸಹಯೋಗದಲ್ಲಿ ಪುರಸ್ಕರಿಸಲು ನಿರ್ಧರಿಸಿದ್ದು ವಿಧ್ಯಾರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಅರ್ಜಿ ಸಲ್ಲಿಸುವ ವಿಧ್ಯಾರ್ಥಿಗಳು
ಶ್ರೀ ಗುರು ಸಹಕಾರ ಸಂಘ
ದೇವಿ ಮೈದಾನ ಹತ್ತಿರ
ಯಲ್ಲಾಪುರ ಇವರಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಪರ್ಕ ಸಂಖ್ಯೆ – 8431549715
ಹೆಚ್ಚಿನ ಮಾಹಿತಿಗಾಗಿ
ರವಿ ನಾಯ್ಕ್ ಇಂಜಿನಿಯರ್
ಅಧ್ಯಕ್ಷರು
ಶ್ರೀ ಗುರು ಸಹಕಾರಿ ಸಂಘ
ಮಂಜುನಾಥ ಎಸ್ ನಾಯ್ಕ್
ಸಂಚಾಲಕರು
ನಾಮಧಾರಿ ವೇಧಿಕೆ
ಯಲ್ಲಾಪುರ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *