Breaking News

ಯಲ್ಲಾಪುರ ತಾಲೂಕಿನ ಶಕ್ತಿ ಪೀಠ ಶ್ರೀ ಗ್ರಾಮದೇವಿ ಸಾನಿದ್ಯ –  ನವರಾತ್ರಿ ವಿಶೇಷ ಅನ್ನ ಪ್ರಸಾದ ಸೇವೆ ಅಭೂತಪೂರ್ವ.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ನವರಾತ್ರಿ ನಿಮಿತ್ತ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದೆ.

ಎರಡನೇ ದಿನವಾದ ಶುಕ್ರವಾರ ದೇವಿಯ ಸನ್ನಿಧಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನ ಸಂತರ್ಪಣೆ ನಡೆಯಿತು.

ಸಹಸಾರು ಭಕ್ತರು ದೇವಿಗೆ ಉಡಿತುಂಬಿ ಅನ್ನಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.


ಪ್ರತಿ ವರ್ಷದಂತೆ ಈ ವರ್ಷವೂ ಸಾಮಾಜಿಕ ಕಾರ್ಯಕರ್ತ ಯುವಮುಖಂಡ ಸಂತೋಷ ನಾಯ್ಕ ಸಾರಥ್ಯದಲ್ಲಿ ಅನ್ನ ಪ್ರಸಾದ ಸೇವೆ ನಡೆಯಿತು.

ಭಗತ್ ಸಿಂಗ್ ಆಟೋ ಚಾಲಕ-ಮಾಲಕರ ಸಂಘ, ಗ್ರಾಮದೇವಿ ಟ್ಯಾಕ್ಸಿ ಚಾಲಕ-ಮಾಲಕರ ಸಂಘ, ಲಾರಿ ಚಾಲಕ-ಮಾಲಕರ ಸಂಘ, ಬಸವೇಶ್ವರ ಗೂಡ್ಸ್ ರಿಕ್ಷಾ ಚಾಲಕ-ಮಾಲಕರ ಸಂಘ, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಪ್ರಮು ದಾನಿಗಳ ಸಹಕಾರದಿಂದ ಅನ್ನಸಂತರ್ಪಣಾ ಕಾರ್ಯಕ್ರಮ ಆಯೋಜನೆಗೊಂಡಿದ್ದು ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪಟ್ಟಣ ಸಮೀಪದ ಅರಣ್ಯದಲ್ಲಿ ಶ್ರೀಗಂಧ ಚೋರರ ಕರಾಮತ್ತು ಗಂಧದ ಮರ ಕಡಿದ ಕಳ್ಳರು.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಮೀಪದಲ್ಲಿರುವ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳರು ತಮ್ಮ ಕೈಚಳಕ ತೋರಿದ್ದು ಗುಣಮಟ್ಟದ ಮತ್ತು …

Leave a Reply

Your email address will not be published. Required fields are marked *