Breaking News

ಹಾಲು ಕರೆವ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದ ಹೆಬ್ಬಾರ್.


ಯಲ್ಲಾಪುರ : ದೇಶ ಕಾಯುತ್ತಿರುವ ಸೈನಿಕರು ದೇಶಕ್ಕೆ ಅನ್ನ ನೀಡುವ ಅನ್ನದಾತರಾದ ರೈತರು ದೇಶದ ಅಭಿವೃದ್ಧಿಗೆ ಬಹು ದೊಡ್ಡ ಆಸ್ತಿಯಾಗಿದ್ದಾರೆ. ಅಂತಹ ಅನ್ನದಾತರ ಬಾಳು ಬೆಳಗಲು ಗೋವುಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಹೈನುಗಾರಿಕೆ ಅಭಿವೃದ್ಧಿಗೆ ಇಂತಹ ಸ್ಪರ್ಧೆಗಳು ಸಹಕಾರಿಯಾಗಲಿದೆ ಹಾಗು ಜಿಲ್ಲೆಯಲ್ಲಿಯೆ ಹೈಟೆಕ್ ಸುಸಜ್ಜಿತ ಪಾಲಿ ಕ್ಲೀನಿಕ್ ಯಲ್ಲಾಪುರದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಅವರು ಪಟ್ಟಣದ ಪಶುವೈದ್ಯ ಆಸ್ಪತ್ರೆ ಆವಾರದಲ್ಲಿ ತಾಲೂಕಿನಲ್ಲಿ ಆಯೋಜಿಸಿದ್ದ ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಆಸ್ಪತ್ರೆ ಆವಾರದಲ್ಲಿ ಗೋವಿಗೆ ಪೂಜಿಸಿ ಕಾರ್ಯಕ್ರಮ ಉದ್ಘಾಟಿಸಿದ್ದು ಅರ್ಥಪೂರ್ಣವಾಗಿತ್ತು.
ಹಾಲು ಕರೆಯುವ ಸ್ಪರ್ಧೆ, ಆರೋಗ್ಯಪೂರ್ಣ ಎತ್ತುಗಳ ಪಾಲನೆ ಪೋಷಣೆ ಹಾಗು ಇನ್ನಿತರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಜಿ.ಪಂ ಮಾಜಿ ಸದಸ್ಯ ವಿಜಯ್ ಮಿರಾಶಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ನರ್ಮದಾ ನಾಯ್ಕ್, ಉಪಾಧ್ಯಕ್ಷ ಅಮಿತ್ ಅಂಗಡಿ, ಇಲಾಖೆ ಪ್ರಮುಖ ಉಮೇಶ್ ಪಂಡಿತ್,ರವಿಭಟ್ ಬರಗದ್ದೆ, ಇನ್ನಿತರರು ಉಪಸ್ಥಿತರಿದ್ದರು.
ಪಶು ವೈಧ್ಯಾಧಿಕಾರಿ ಸುಭ್ರಾಯ ಭಟ್ ಸ್ವಾಗತಿಸಿ ವಂದಿಸಿದರು ಶಿಕ್ಷಕ ಚಂದ್ರಹಾಸ ನಾಯ್ಕ್ ನಿರೂಪಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *