Breaking News

ಯಲ್ಲಾಪುರದಲ್ಲಿ ಮತ್ತೆ ಕಾಣಿಸಿಕೊಂಡ ಹೆಮ್ಮಾರಿ ಕೊರೊನಾ

ಪ್ರತಿಧ್ವನಿ,ಯಲ್ಲಾಪುರ : ವರ್ಷದ ನಂತರ ಮತ್ತೆ ಓರ್ವ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಡಪಟ್ಟಿದ್ದು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಭದ್ರತೆ ಕಲ್ಪಿಸುವ ಸಲುವಾಗಿ ದೇಶದ ವಿವಿದ ರಾಜ್ಯಗಳಿಂದ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸಿದ್ದು ರಾಜಸ್ಥಾನದಿಂದ ಬಂದ 34 ವರ್ಷ ಪ್ರಾಯದ ಯುವಕನೋರ್ವನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ.


ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದು ಚಿಕಿತ್ಸೆ ಪಡೆದು ಹೋಗಿದ್ದರೂ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮರಳಿ ಆಸ್ಪತ್ರೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ವೈದ್ಯರು ಗಂಟಲುದ್ರವ ಪರೀಕ್ಷಿಸಿದಾಗ ಕೊರೊನಾ ಸೋಂಕಿರುವುದು ದೃಡಪಟ್ಟಿದೆ.

ತಕ್ಷಣ ಅಲರ್ಟ್ ಆದ ಆರೋಗ್ಯ ಸಿಬ್ಬಂದಿಗಳು ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಚುನಾವಣಾ ಕರ್ತವ್ಯಕ್ಕೆ ಬಂದಿರುವ ೭೦ಕ್ಕೂ ಅಧಿಕ ಯೋಧರನ್ನು ಪರೀಕ್ಷೆಗೆ ಒಳಪಡಿಸಿದ್ದು ಫಲಿತಾಂಶ ಬರಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *