Breaking News

ಯಲ್ಲಾಪುರದ ಸವಣಗೇರಿಯಲ್ಲಿ ರವಿವಾರ ನಡೆದ ಶಾಲೆಯ ಸ್ವಚ್ಚತಾ ಕಾರ್ಯ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಹೊರ ವಲಯ ಸವಣಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದ ಸ್ವಚ್ಚತಾ ಕಾರ್ಯ ಸ್ಥಳೀಯ ನಾಗರಿಕರು ಸೇರಿದಂತೆ ಹಳೆಯ ವಿದ್ಯಾರ್ಥಿಗಳು, ಪ್ರಮುಖರೊಂದಿಗೆ ರವಿವಾರ ನೆರವೇರಿತು.


ಶಾಲೆಯ ಆವರಣದಲ್ಲಿ ಬೆಳೆದ ಅನವಶ್ಯಕ ಗಿಡಗಂಟಿಗಳನ್ನು ತೆಗೆದು ಸ್ವಚ್ಚಗೊಳಿಸಲಾಯಿತು.


ಶಾಲೆಯ ಸ್ವಚ್ಚತಾ ಕಾರ್ಯದ ಶ್ರಮದಾನದಲ್ಲಿ ಪಾಲ್ಗೊಂಡ ರವಿ ನಾಯ್ಕ, ಮಂಜುನಾಥ ನಾಯ್ಕ,ಜಾಬೀರ್ ಶೇಖ್, ತಿಮ್ಮಣ್ಣ,ರಾಘವೇಂದ್ರ ಹೆಗಡೆ, ಉಮಾಮಹೇಶ್ವರಭಟ್ಟ , ವಿಶ್ವನಾಥ ಭಟ್ಟ, ಯುವರಾಜ ಗೊಂದಳಿ, ಶಶಿಧರ್ ಗೊಂದಳಿ, ವಿಜಯಾ ಬಾಂದೇಕರ್,ಪ್ರೇಮಾನಂದ ಗೊಂದಳಿ, ಮಾಜಿ ವಿದ್ಯಾರ್ಥಿನಿ ಪವಿತ್ರಾ ಪಡ್ತಿ,ಧನುಷ್ ಗೊಂದಳಿ,ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ ಶೇಖ್,ಉಜ್ಮಾ, ಜಯಂತ, ನೈಜಾನ್, ರಿಹಾನ್, ಮುಫಿದ್ , ಪ್ರಿಯಾ ಇವರೆಲ್ಲರಿಗೂ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್ ಹೊಸ್ಕೇರಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *