Breaking News

ಯಲ್ಲಾಪುರದ ಹಿಟ್ಟಿಬೈಲ್ ಸಮೀಪ ಬಸ್,ಕಾರು,ಸ್ಕೂಟಿ ನಡುವೇ ಭೀಕರ ಅಪಘಾತ ಸವಾರರಿಬ್ಬರ  ಸಾವು.

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲ್ಲೂಕಿನ ಹಿಟ್ಟಿಬೈಲ್ ಸಮೀಪ ಭಾನುವಾರ ಮಳೆಯ ನಡುವೆಯೇ ಬಸ್, ಕಾರು ಹಾಗೂ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,ಯಲ್ಲಾಪುರ ತಾಲ್ಲೂಕು ಆಸ್ಪತ್ರೆ ಆಂಬುಲೆನ್ಸ್ ಮೂಲಕ ಮೃತರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ಆಗಮಿಸಿದ್ದು ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಾಗು ಮೃತ ಯುವಕರ ಬಗ್ಗೆ ಇನ್ನಷ್ಟೆ ತಿಳಿಯಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *