Breaking News

ಹೆಬ್ಬಾರ ನಗರದಲ್ಲಿ 237 ಮನೆಗಳ ಹಂಚಿಕೆಗೆ ಅರ್ಜಿ ಆಹ್ವಾನ.


ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ ಪಂಚಾಯಿತಿ ನಿವಾಸಿಗಳಿಗೆ ಸಿಹಿ ಸುದ್ದಿ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಯಲ್ಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆ ಹಿಂಭಾಗದ ಹೆಬ್ಬಾರ ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಮಂಜೂರಾಗಿರುವ 579 (G+2) ಮನೆಗಳ ಪೈಕಿ 237 ಮನೆಗಳ ಹಂಚಿಕೆಗಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಒಂದು ಮನೆಯ ಘಟಕದ ವೆಚ್ಚ:-ರೂ. 8,13,204/- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ ಯಲ್ಲಾಪುರ ನಿವಾಸಿಗಳು ಪಟ್ಟಣ ಪಂಚಾಯಿತಿ ಯಲ್ಲಾಪುರ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದುಕೊಂಡು, ಅರ್ಜಿ ಜೊತೆಗೆ ಸಲ್ಲಿಸಬೇಕಾದ ದಾಖಲಾತಿಗಳೊಂದಿಗೆ, ಎಸ್‌ಸಿ/ಎಸ್‌ಟಿ ವರ್ಗದವರು ಪ್ರಾರಂಭಿಕ ವಂತಿಕೆಯ ಮೊತ್ತ ರೂ.81,320/- (10%) ಮತ್ತು ಇತರೆ ವರ್ಗದವರು ಪ್ರಾರಂಭಿಕ ವಂತಿಕೆಯ ಮೊತ್ತ ರೂ.1,21,981/- (15%) ಗಳನ್ನು KSDB PMAY-HFA 97134 Dus 129 ಈ ಹೆಸರಿಗೆೆ ಡಿ ಡಿ ಮುಖಾಂತರ ವಂತಿಕೆ ಭರಿಸಿ ಯಲ್ಲಾಪುರ ಪಟ್ಟಣ ಪಂಚಾಯ್ತಿಯಲ್ಲಿ ದಾಖಲಾತಿಗಳೊಂದಿಗೆ ದಿನಾಂಕ: 15.08.2023 ರಿಂದ 30.೦9.2023 ರವರೆಗೆ ಪಟ್ಟಣ ಪಂಚಾಯಿತಿ ಯಲ್ಲಾಪುರ ಕಛೇರಿ ಸಮಯದಲ್ಲಿ ಅರ್ಜಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 30.10.2023 ರವರೆಗೆ ಸ್ವೀಕರಿಸಲಾಗುವುದು, ವಿಳಂಬವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಸುಂದರ ಮನೆಗಳ ನೈಜ ಚಿತ್ರಣ ಹೆಬ್ಬಾರ್ ನಗರದ G+2 ಮನೆಗಳು


ಹೆಚ್ಚಿನ ವಿವರಕ್ಕಾಗಿ ಯಲ್ಲಾಪುರ ಪಟ್ಟಣ ಪಂಚಾಯಿತಿ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಉಪ ವಿಭಾಗವನ್ನು ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಶ್ರೀ. ಸುನೀಲ ಗಾವಡೆ (ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯಿತಿ ಯಲ್ಲಾಪುರ) – 9986773995, ಕು. ರೇಷ್ಮಾ ಬಿರಾದಾರ (ಸೈಟ್ ಇಂಜಿನಿಯರ್) -9902635276, ಶ್ರೀ. ಪ್ರತೀಕ್ (ಸಹಾಯಕ ಅಭಿಯಂತರರು ಕ.ಕೊ.ಅ.ಮ ಉ.ವಿಭಾಗ ಕಛೇರಿ ಬೆಳಗಾವಿ)-7892031006, ಶ್ರೀ. ಬಿ.ಎಸ್. ಶಂಭುಲಿಂಗಪ್ಪ (ಕಾರ್ಯಪಾಲಕ ಅಭಿಯಂತರರು ಕ.ಕೊ.ಅ.ಮ ಉ.ವಿಭಾಗ ಕಛೇರಿ ಬೆಳಗಾವಿ)-೮೦೮೪೪೯೨೩೭೩ 8084492373 ಗೆ ಸಂಪರ್ಕಿಸಬಹುದಾಗಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಹಾಯಕ ಕಾರ್ಯಪಾಲಕ ಅಭಿಯಂತರರು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಬೆಳಗಾವಿ ಉಪ ವಿಭಾಗ, ಬೆಳಗಾವಿ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *