Breaking News

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸಚಿವಗಿರಿಯಿಂದ ತೊಲಗಿಸಿ.

ಪ್ರತಿಧ್ವನಿ ಯಲ್ಲಾಪುರ : ಸನಾತನ ಹಿಂದೂ ಧರ್ಮದ ಕುರಿತು ತುಚ್ಛ ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿ ತಕ್ಷಣ ಬಂಧಿಸುವAತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ತಿನ ಯಲ್ಲಾಪುರ ಘಟಕದ ವತಿಯಿಂದ ತಮಿಳುನಾಡಿನ ರಾಜ್ಯಪಾಲರು, ಮುಖ್ಯಂತ್ರಿಗಳು ಹಾಗೂ ದೇಶದ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಸನಾತನ ಹಿಂದೂ ಧರ್ಮವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ತಮಿಳುನಾಡು ಸಚಿವ ಉದಯರವಿ ಸ್ಟಾಲಿನ್ ಡೆಂಗ್ಯೂ, ಮಲೇರಿಯಾ, ಕೊರೊನಾದಂತಹ ಮಾರಣಾಂತಿಕ ರೋಗಗಳಿಗೆ ಹೋಲಿಸಿ ಹಿಂದೂ ಧರ್ಮವನ್ನು ಬುಡಸಹಿತ ನಿರ್ಮೂಲನೆ ಮಾಡಬೇಕೆಂದು ಸಾರ್ವಜನಿಕವಾಗಿ ಭಾಷಣ ಮಾಡುವ ಮೂಲಕ ಅಧಿಕಾರ ಗೌಪ್ಯತೆಯ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ.

ನಿಮ್ಮ ಸ್ವಂತ ಮನೆಯ ಕನಸು ನನಸಾಗಲು ಯಲ್ಲಾಪುರದ ಹೆಬ್ಬಾರ್ ನಗರದಲ್ಲಿG+2 ಮಾದರಿ ಮನೆಗೆ ಅರ್ಜಿ ಸಲ್ಲಿಸಿ.

ತಮಿಳುನಾಡಷ್ಟೇ ಅಲ್ಲದೇ ಇಡೀ ದೇಶದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ.
ಆದ್ದರಿಂದ ಉದಯರವಿ ಸ್ಟಾಲಿನ್ ಅವರನ್ನು ತಮಿಳುನಾಡು ಸರ್ಕಾರದ ಸಚಿವ ಸ್ಥಾನದಿಂದ ಕಿತ್ತೊಗೆದು ಸಮಾಜದ ಸ್ವಾಸ್ಥö್ಯ ಕೆಡಿಸುತ್ತಿರುವ ಅವರನ್ನು ಜೈಲಿಗೆ ಅಟ್ಟಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಪರಿಷತ್‌ನ ಪ್ರಮುಖರಾದ ರಾಮು ನಾಯ್ಕ, ನಾರಾಯಣ ನಾಯಕ, ಜಿ.ಎನ್ ಗಾಂವ್ಕರ, ಸೋಮೇಶ್ವರ ನಾಯ್ಕ, ವಿನೋದ ತಳೇಕರ, ಅನಂತ ಸುಬ್ರಾಯ ಗಾಂವ್ಕರ, ಮಹೇಶ ನಾಯ್ಕ, ಹರೀಶ್ ಎಂ ಭೋವಿವಡ್ಡರ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *