Breaking News

ಏನೆ ಮಾಡಿದರು ನನ್ನ ಸೋಲಿಸಲು ಆಗಲಿಲ್ಲ ಮತದಾರ,ಭಗವಂತ ಬೆನ್ನಿಗಿದ್ದಾನೆ-ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ವಿರೋಧಿಗಳೊಂದು ಬಗೆದರೆ ದೈವವೊಂದು ಬಗೆದಿತ್ತು. ದೇವ ದುರ್ಲಬ ಮತದಾರರ ಆಶೀರ್ವಾದದಿಂದ ವಿರೋಧಿಗಳು ನನ್ನ ಗೆಲುವನ್ನು ತಡೆಯಲು ಸಾದ್ಯವಾಗಲಿಲ್ಲ. ತಾಯಿ ಗ್ರಾಮದೇವಿಯು ಅನುಗ್ರಹ ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಲ ನೀಡಿ ಹರಸಿದ್ದಾಳೆ. ಇದೇ ಮೊದಲ ಬಾರಿಗೆ ವಿರೋದ ಪಕ್ಷದಲ್ಲಿ ಕುಳಿತು ಕೆಲಸ ಮಾಡುವ ಅವಕಾಶ ಒದಗಿ ಬಂದಿದೆ. ಎಂದಿಗೂ ಜಾತಿ ರಾಜಕಾರಣ ಮಾಡಿದವನಲ್ಲ. ನೀತಿಯಲ್ಲಿ ನಂಬಿಕೆ ಇಟ್ಟವನು. ಕೊಂಚ ಬೇಸರ ನೋವು ಈ ಚುನಾವಣೆ ನನಗೆ ತಂದಿದೆ ಕಾರಣ ಪಕ್ಷ ಸಿದ್ದಾಂತ ಎಂದು ತತ್ವ ಬೋಧಿಸಿದವರೆ ಸಿದ್ದಾಂತಕ್ಕೆ ಚೂರಿಹಾಕಿ ನನ್ನ ಸೋಲಿಗೆ ಪ್ರಯತ್ನಿಸಿದ್ದು ಬೇಸರವಾಗಿತ್ತು. ಸಚಿವನಾಗಿ ನನಗೆ ಸಿಕ್ಕ ಮೂರು ವರ್ಷಗಳ ಅಲ್ಪ ಅವದಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ತೃಪ್ತಿಯಾಗುವಷ್ಟು ಮತಗಳಾಗಿ ಫಲ ನೀಡಲಿಲ್ಲ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು.


ಅವರು ಪಟ್ಟಣದ ಅಡಿಕೆ ಭವನದಲ್ಲಿ ಅಡಿಕೆ ವ್ಯಾಪಾರಸ್ಥರ ಸಂಘದ ಅಡಿಯಲ್ಲಿ ಹಮ್ಮಿಕೊಂಡ ಶಿವರಾಮ ಹೆಬ್ಬಾರ್ ಅವರ ಅಭಿನಂದನಾ ಸಭೆಯಲ್ಲಿ ಗೌರವಾದರಗಳನ್ನು ಸ್ವೀಕರಿಸಿ ಮಾತನಾಡಿದರು.


ನನ್ನ ರಾಜಕೀಯ ಪಯಣಕ್ಕೆ ಮುನ್ನುಡಿ ಬರೆದ ಎಪಿಎಂಸಿ ಪ್ರಾಂಗಣದಲ್ಲಿ ನಿಂತು ಮಾತನಾಡುವುದೆ ಒಂದು ಹೆಮ್ಮ ಎನಿಸುತ್ತದೆ. ದೈವೇಚ್ಚೆ ಯಿಂದ ಒಂದು ಜಾತಿಯಲ್ಲಿ ಹುಟ್ಟಿದ್ದೇನೆ ಆದರೆ ಹಲವಾರು ಸಮುದಾಯಗಳ ಜೊತೆ ಬೆರೆತು ಬದುಕಿದ್ದೇನೆ ಎಂದಿಗು ನಾನು ನಿರ್ಧಿಷ್ಟವಾದ ಒಂದು ಜಾತಿಗೆ ಸೀಮಿತವಾಗಿರಲು ಬಯಸುವುದಿಲ್ಲ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ ಡಿ.ಸಿ.ಎಂ ಡಿ.ಕೆ ಶಿವಕುಮಾರ್, ಕಾರ್ಮಿಕ ಮಂತ್ರಿ ಸಂತೋಷ್ ಲಾಡ್ ಹಾಗು ಜಿಲ್ಲೆಯಲ್ಲಿ ಆಯ್ಕೆಯಾದ ಆಡಳಿತ ಪಕ್ಷದ ಶಾಸಕರು ಮತ್ತು ಸಚಿವರ ಜೊತೆಯಲ್ಲಿ ಉತ್ತಮ ಬಾಂಧವ್ಯವಿದ್ದು ಕ್ಷೇತ್ರದ ಅಭಿವೃದ್ಧಿಗೆ ಎಲ್ಲಿಯೂ ಚ್ಯುತಿ ಬಾರದಂತೆ ನೋಡಿಕೊಳ್ಳುತ್ತೇನೆ. ನನ್ನ ಸೋಲಿಸಲಾಗದೇ ಹತಾಶರಾದವರು ಆರೋಗ್ಯ ನೋಡಿಕೊಳ್ಳಿ; ಮತದಾರ ಭಗವಂತ ನನ್ನ ಬೆನ್ನಿಗಿದ್ದಾನೆ ಎಂದು ಹೇಳಿದರು.


ಇದಕ್ಕು ಮುನ್ನ ಅಡಿಕೆ ವ್ಯಾಪಾರಸ್ಥರ ಸಂಘದ ಅಡಿಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ನಾಲ್ಕನೆ ಬಾರಿಗೆ ಶಾಸಕರಾಗಿ ಆಯ್ಕೆಯಾದ ಹೆಬ್ಬಾರ್ ಅವರಿಗೆ ಸನ್ಮಾನ ಗೌರವ ಸಲ್ಲಿಸಲಾಯಿತು ಹಾಗು ಇದೇ ಸಂದರ್ಭದಲ್ಲಿ ವಿವಿಧ ವರ್ತಕರು, ಸಂಘ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳ ಪ್ರಮುಖರು ಶಾಸಕರಿಗೆ ಗೌರವ ಸಲ್ಲಿಸಿದರು.


ಶಾಸಕ ಶಿವರಾಮ ಹೆಬ್ಬಾರ ಅವರು ಜನರೊಂದಿಗೆ ಇರುವ ಬದ್ದತೆ, ನಡೆದು ಬಂದ ರಾಜಕೀಯ ಪಯಣ, ಎದುರಿಸಿದ ಸವಾಲುಗಳು ಸಾಧಿಸಿದ ಸಾಧನೆಗಳ ಕುರಿತು ಅಡಿಕೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರವಿ ಹೆಗಡೆ, ಹವ್ಯಕ ಮಹಾ ಸಭಾದ ಅಧ್ಯಕ್ಷ ಡಿ.ಶಂಕರ ಭಟ್, ಅಡಿಕೆ ವ್ಯಾಪಾರಸ್ಥರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಎನ್ ಗಾಂವ್ಕರ್, ಮಲೆನಾಡು ಅಭಿವೃದ್ಧಿ ಸೊಸೈಟಿ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವಿ ಶಾನಬಾಗ್ ಮಾತನಾಡಿದರು. ವೇದಿಕೆಯಲ್ಲಿ ವಿಕಾಸ್ ಅರ್ಬನ್ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ ಉಪಸ್ಥಿತರಿದ್ದರು. ಮಾರುತಿ ಘಟ್ಟಿ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *