Breaking News

ಎನ್.ಎಸ್.ಎಸ್. ಘಟಕ ಹಾಗು ಕಾಲೇಜು ಮತ್ತು ಸ.ಹಿ.ಪ್ರಾ ಶಾಲೆ ವಿದ್ಯಾರ್ಥಿಗಳ ಪರಿಸರ ದಿನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ£ ಎನ್.ಎಸ್.ಎಸ್, ಸ್ಕೌಟ್ ಅಂಡ್ ಗೈಡ್ಸ್ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದರ ಅಂಗವಾಗಿ ಪರಿಸರ ಅರಿವು ಕುರಿತ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು ಹಾಗೆಯೇ ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾಲೇಜಿನ ಪಕ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕೂಡ ಈ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.


ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಿ.ಎಸ್ ಭಟ್ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮಧಿಕಾರಿ ಡಿ.ಜಿ ತಾಪಸ್ ಹಾಗೂ ಶ್ರೀರಾಮಕೃಷ್ಣ ಗೌಡ, ರೇಂಜರ್ ಲೀಡರ್ ಕು. ಭವ್ಯ ಸಿ. ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಎನ್.ಬಿ ಮೆಣಸುಮನೆ , ದೈಹಿಕ ಶಿಕ್ಷಕಿ ಅಕ್ಕುಬಾಯಿ .ಎಲ್. ದರಗದ, ಎನ್.ಎಸ್.ಎಸ್ ನಾಯಕಿಯರಾದ ಕು.ದಿವ್ಯ ನಾಯಕ್, ಕು.ಸ್ನೇಹ ಆಚಾರಿ, ನಾಯಕರಾದ ಕು.ದೀಪಕ್ ಕುಂಕಿ ಕು.ಭವಾನಿ ಶಂಕರ್ ಹಾಗೂ ಸ್ಕೌಟ್ಸ್ & ಗೈಡ್ಸ್ ಪ್ರಸಾದ್ ಭಟ್, ವಿನಯ್ ಕರಮನೆ , ಗಣೇಶ್ ಗಾಳಪ್ಪನವರ್, ಜಯಂತ್ ಗೋಸಂಗಿ, ಅಂಜಲಿ, ವೀಣಾ ಭಟ್, ವಾಣಿ ಎಂಎಸ್ , ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿ ಕು. ಗಣೇಶ್ ಶೆಟ್ಟಿ ಮುಂತಾದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *