Breaking News

ಏತ ನೀರಾವರಿ ಯೋಜನೆಯ ಕಾಮಗಾರಿ ವೀಕ್ಷಿಸಿದ ಶಾಸಕ ಶಿವರಾಮ್ ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಹೊಸಳ್ಳಿ ಗ್ರಾಮ ಏತ ನೀರಾವರಿ ( ಕೆರೆ ನೀರು ತುಂಬಿಸುವ ) ಯೋಜನೆಯ ಬಹುತೇಕ ಕಾಮಗಾರಿ ಪೂರ್ಣ ಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ.

ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಪ್ರಾಯೋಗಿಕ ಕಾರ್ಯದ ಪರಿಶೀಲನೆಯನ್ನು ನಡೆಸಿದರು.

ಸುಮಾರು 3.75 ಕೋಟಿ ರುಪಾಯಿ ವೆಚ್ಚದ ಏತ ನೀರಾವರಿ ಯೋಜನೆ ಇದಾಗಿದ್ದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಯೋಜನೆಗಳಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆ ಶಾಸಕ ಹೆಬ್ಬಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿತ್ತು. ಈ ಯೋಜನೆಯಿಂದ ಸುತ್ತಮುತ್ತಲಿನ ಭಾಗಕ್ಕೆ ಅನುಕೂಲವಾಗಲಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *