Breaking News

ಯಲ್ಲಾಪುರದ ರವೀಂದ್ರನಗರದ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್  ಸೇರ್ಪಡೆ

ಪ್ರತಿಧ್ವನಿ ಯಲ್ಲಾಪುರ :ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ, ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಪಕ್ಷಸೇರ್ಪಡೆ ಪರ್ವ ಆರಂಭಗೊಂಡಿದ್ದು ವಿವೇಕ್ ಹೆಬ್ಬಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ರಾಜಕೀಯ ರಣಕಹಳೆ ಮೊಳಗಿಸಿದೆ ಅದರ ಭಾಗವಾಗಿ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿಕೊಂಡು ಯಲ್ಲಾಪುರ ಪಟ್ಟಣದ ರವೀಂದ್ರನಗರದ ಭಾರತೀಯ ಜನತಾ ಪಕ್ಷದ ಹಲವು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸುರೇಶ ಕಟ್ಟದಮನಿ, ಪ್ರತಾಪ ಮೂರ್ತಿ, ಯಮನಪ್ಪ ಭೋವಿವಡ್ಡರ್, ಬಸವರಾಜ ಬೋವಿವಡ್ಡರ್, ನಾಗಪ್ಪ ಬಾರಕೇರ, ಶಿವಪ್ಪ ಭೋವಿವಡ್ಡರ್, ಗೌರಮ್ಮ ಬಳಗಾರ, ದ್ಯಾಮವ್ವ ಜೋಗಿ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ವಿ.ಎಸ್. ಭಟ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿಜಯ ಮಿರಾಶಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಗ್ಯಾರಂಟಿ ಯೋಜನೆ ಸಮಿತಿಯ ತಾಲೂಕು ಅಧ್ಯಕ್ಷರಾದ ಉಲ್ಲಾಸ ಶಾನಭಾಗ, ಪ್ರಮುಖರಾದ ಎಂ.ಡಿ. ಮುಲ್ಲಾ, ಜಗನ್ನಾಥ ರೇವಣಕರ, ಕುಮುದಾ ಸಾಣೆ, ಮಾರುತಿ ಭೋವಿವಡ್ಡರ್, ಶಿವರಾಜ್ ಬೊವಿವಡ್ಡರ್, ಮಹೇಶ ನಾಯ್ಕ, ಶರತ್ ಹಾಗೂ ಶಂಕರ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರವೀಂದ್ರ ನಗರದಲ್ಲಿನ ಆಯುಷ್ಮಾನ್ ಆರೋಗ್ಯ ಕೇಂದ್ರ ಮುಚ್ಚುತ್ತಾರೆ ಎಂಬ ಮಾಹಿತಿ ಕಳೆದ ಕೆಲವು ದಿನಗಳಿಂದ ಮಾದ್ಯಮಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರು ಹಾಗು ಸಾರ್ವಜನಿಕರು ಶಾಸಕ ಶಿವರಾಮ ಹೆಬ್ಬಾರ್ ಅವರಲ್ಲಿ ಮುಚ್ಚದಂತೆ ಮನವಿ ಸಲ್ಲಿಸಿದರು, ಮನವಿ ಸ್ವೀಕರಿಸಿದ ಶಾಸಕರು ಆಯುಷ್ಮಾನ್ ಆರೋಗ್ಯ ಕೇಂದ್ರ ಮುಚ್ಚದಂತೆ ಆರೋಗ್ಯ ಇಲಾಖೆಯೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *