Breaking News

17 ನೆ ಬಾರಿಗೆ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ. ರಾಜ್ಯದ 2026-27 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17 ನೇ ಬಾರಿಗೆ 4.48 ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡಿಸಿದ್ದಾರೆ.
“ರಾಜ್ಯದಲ್ಲಿ 56432 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ”  2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಬಜೆಟ್‌ ಮುಖ್ಯಾಂಶಗಳು:

  1. 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್‌
  2. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು
  3. ಕಾಲೇಜು ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಪುನರಾರಂಭ
  4. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಸಾಲ
  5. ರಾಜ್ಯದ 5 ಕಡೆ ರೇಷ್ಮೆ ಪಾರ್ಕ್
  6. ಬೆಂಗಳೂರು ಮೆಟ್ರೋ ವಿಸ್ತರಣೆ
  7. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2 ಸಾವಿರ ಹುದ್ದೆ ಭರ್ತಿ
  8. ಶಾಲಾ ಕಾಲೇಜುಗಳಿಗೆ 15 ಸಾವಿರ ಶಿಕ್ಷಕರ ನೇಮಕಾತಿ
  9. ಕಾರವಾರದಲ್ಲಿ 198 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
  10. ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ
  11. ಅಲ್ಪಸಂಖ್ಯಾತ, SC-ST ನಿಗಮಗಳ ಸಾಲಗಳಿಗೆ ಬಡ್ಡಿ ಮನ್ನಾ
  12. ಮಾನವ ವನ್ಯ ಜೀವಿಗಳ ಸಂಘರ್ಷ ತಡೆಗೆ 1445 ಕೋಟಿ ಮೀಸಲು
  13. ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಯಲ್ಲಿ ಬಿಸಿಯೂಟ
  14. ರಾಜ್ಯದ 11 ಜಿಲ್ಲೆಗಳಲ್ಲಿ 12 ಪೋಲಿಸ್ ಠಾಣೆ ಸ್ಥಾಪನೆ
  15. ಕುಕ್ಕೆ ಕೊಲ್ಲೂರು ದೇಗುಲ ಅಭಿವೃದ್ಧಿ
  16. ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರವಿತರಣೆ
  17. ಉದ್ಯೋಗಸ್ಥ SC-ST ಮಹಿಳೆಯರಿಗೆ ಹೊಸ ಹಾಸ್ಟೆಲ್‌ ಘೋಷಣೆ
  18. ಈ ವರ್ಷ 1.32 ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರ
  19. ಕರ್ನಾಟಕ ರಾಜ್ಯದ ಒಟ್ಟಾರೆ ಸಾಲ 8.24 ಲಕ್ಷ ಕೋಟಿ
  20. ಬೆಂಗಳೂರಿನಲ್ಲಿ AI ಕೇಂದ್ರ
  21. ಒಟ್ಟು 56,432 ಹುದ್ದೆಗಳಿಗೆ ನೇಮಕಾತಿ
  22. ಮದ್ಯ ದರ ಹಂತ ಹಂತವಾಗಿ ಏರಿಕೆ
  23. ಸವಿತಾ ಸಮಾಜದವರಿಗೆ ಸಲೂನ್ ತೆರೆಯಲು ಶೇ 4 ಬಡ್ಡಿ ದರದಲ್ಲಿ 10 ಲಕ್ಷ ಸಾಲ
  24. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಜೊತೆಗೆ 300 ಹಾಸಿಗೆಯ ಆಸ್ಪತ್ರೆ
  25. ಮಹಿಳಾ ವೃದ್ಧಾಶ್ರಮ ಸ್ಥಾಪನೆ
  26. ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ
  27. ಅಲ್ಪಸಂಖ್ಯಾತ ಮಹಿಳಾ ಸಹಕಾರಿ ಸಂಘ ಸ್ಥಾಪನೆ ಘೋಷಣೆ
  28. ಮಲೆನಾಡು ಕರಾವಳಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಅನುದಾನ
  29. ಮೀನುಗಾರರಿಗೆ ಪ್ರೋತ್ಸಾಹ ಧನ 20 ಸಾವಿರಕ್ಕೆ ಏರಿಕೆ
  30. ಗ್ರಾಮ ಪಂಚಾಯತ್ ವಿದ್ಯುತ್ ಬಿಲ್ ಹೊರೆ ತಪ್ಪಿಸಲು ಸೋಲಾ‌ರ್ ಗ್ರಿಡ್ ಸ್ಥಾಪನೆ

    31.800 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ

    33.3900 ಕೋಟಿ ರೂಗಳ ವೆಚ್ಚದಲ್ಲಿ ಎಡಿಬಿ, ಕೆಕೆಆರ್‌ಡಿಬಿ ಮತ್ತು ಕೆಎಂಇಆರ್‌ಸಿ ನೆರವಿನೊಂದಿಗೆ 800 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ

  1. ವಿಶ್ವವಿದ್ಯಾನಿಲಯಗಳಲ್ಲಿ 1,000 ಬೋಧಕ ಹುದ್ದೆಗಳ ಭರ್ತಿ
  2. 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಪದವಿ ಕಾಲೇಜುಗಳ ಉನ್ನತಿಕರಣ
  3. 500 ಕೋಟಿ ರೂಪಾಯಿ ವೆಚ್ಚದಲ್ಲಿ ಐಐಟಿ ಮಾದರಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ವಿಶ್ವವಿದ್ಯಾಲಯದ ಅಭಿವೃದ್ಧಿ
  4. ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜ್ ಗಳಲ್ಲಿನ ಮಹಿಳಾ ಅಧಿಕ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ
  5. ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಧಾರವಾಡ ಮತ್ತು ಬೆಂಗಳೂರಿನಲ್ಲಿ ಡಿಜಿಟಲ್ ಲೈಬ್ರರಿ ಹಾಗು ಅಧ್ಯಯನ ಕೇಂದ್ರ ಸ್ಥಾಪನೆ
  6. NCC ಕೆಡಿತ್ ಕಾರ್ಯ ಬಲ ಹೆಚ್ಚಳ
  7. ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು.

ಒಟ್ಟಿನಲ್ಲಿ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ದಶಕಗಳ ಕನಸಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಘೋಷಿಸಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಎನ್ನುತ್ತಿದ್ದಾರೆ ಯಲ್ಲಾಪುರದ ಜನತೆ.

ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ “ಸರ್ವರ ಸಬಲೀಕರಣ – ಅವಕಾಶಗಳ ಅನಾವರಣ, ನವ ಕರ್ನಾಟಕ ನಿರ್ಮಾಣ” ಎಂಬ ದೃಷ್ಠಿಕೋನವನ್ನು ಪ್ರತಿಬಿಂಬಿಸುವಂತಹ ಜನಪರ ಬಜೆಟ್ ಆಗಿದೆ  

ಬಜೆಟ್‌ನಲ್ಲಿ ನಾಡಿನ ಅನ್ನದಾತರಾದ ರೈತರ ಹಿತಾಸಕ್ತಿ ಕಾಪಾಡುವ ಹಲವು ಯೋಜನೆಗಳಿಗೆ ಆದ್ಯತೆ ನೀಡಿರುವುದು ಸಂತೋಷಕರ ಸಂಗತಿಯಾಗಿದೆ. ಕೃಷಿ, ಮೀನುಗಾರಿಕೆ ಹಾಗೂ ಶ್ರಮಿಕ ವರ್ಗದ ಸಮಗ್ರ ಕಲ್ಯಾಣಕ್ಕೆ ಹೊಸ ಯೋಜನೆಗಳನ್ನು ಘೋಷಿಸಿರುವುದು ಗ್ರಾಮೀಣ ಆರ್ಥಿಕತೆಗೆ ಬಲ ತುಂಬುವ ಕಾರ್ಯವಾಗಿದೆ. ವಿಶೇಷವಾಗಿ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಗಣಕೀಕರಣ (ಡಿಜಿಟಲೀಕರಣ) ಯೋಜನೆಗಳಿಗೆ ಉತ್ತೇಜನ ನೀಡಿರುವುದು ಸಹಕಾರಿ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ರೈತರು ಮತ್ತು ಸದಸ್ಯರಿಗೆ ಇನ್ನಷ್ಟು ಸುಗಮ ಸೇವೆ ದೊರಕುವಂತೆ ಮಾಡಲಿದೆ ಎಂದು ಅವರು ಹೇಳಿದರು.

ಇದಲ್ಲದೆ ನಮ್ಮ ಉತ್ತರ ಕನ್ನಡ ಜಿಲ್ಲೆಯ ಬಹುಕಾಲದ ಪ್ರಮುಖ ಬೇಡಿಕೆಯಾದ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಕೊಡುಗೆ ನೀಡಿದೆ. ಕಾರವಾರದಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ 197 ಕೋಟಿ ರೂಪಾಯಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿರುವುದು ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ನೆರವಾಗಲಿದೆ. ಇದರಿಂದ ಜಿಲ್ಲೆಯ ಜನರು ಉನ್ನತ ಮಟ್ಟದ ಚಿಕಿತ್ಸೆಗೆ ದೂರದ ನಗರಗಳಿಗೆ ತೆರಳಬೇಕಾದ ಅನಿವಾರ್ಯತೆ ಕಡಿಮೆಯಾಗಲಿದೆ.

ಜಲ ಸಂಪನ್ಮೂಲ ಮತ್ತು ನೀರಾವರಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಮಹತ್ವದ ಆದ್ಯತೆ ನೀಡಲಾಗಿದೆ. ನೀರಾವರಿ ಯೋಜನೆಗಳ ವಿಸ್ತರಣೆ ಹಾಗೂ ಜಲ ಸಂರಕ್ಷಣೆ ಕ್ರಮಗಳು ಕೃಷಿ ಕ್ಷೇತ್ರಕ್ಕೆ ಶಾಶ್ವತ ಬಲ ನೀಡಲಿವೆ. ಆರೋಗ್ಯ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ವಿಸ್ತರಣೆ, ಆಸ್ಪತ್ರೆಗಳ ಸುಧಾರಣೆ ಮತ್ತು ಹೊಸ ವೈದ್ಯಕೀಯ ಸೌಲಭ್ಯಗಳ ಸ್ಥಾಪನೆ ಮೂಲಕ ಜನರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಹಾಗೂ ಅಲ್ಪಸಂಖ್ಯಾತರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕೂ ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಿರುವುದು ಸಮಾನತೆಯ ಸಮಾಜ ನಿರ್ಮಾಣಕ್ಕೆ ದಾರಿ ಮಾಡಿಕೊಡುತ್ತದೆ. ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಮೂಲಕ ಈ ವರ್ಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.

ಇದಲ್ಲದೆ, ಕರ್ನಾಟಕ ರಾಜ್ಯದ ಸಮೃದ್ಧ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆ ಹಾಗೂ ಸಂರಕ್ಷಣೆಗೆ “ಹವ್ಯಕ ಭಾಷಾ ಅಕಾಡಮಿ” ಸ್ಥಾಪನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಿರುವುದು ಅತ್ಯಂತ ಶ್ಲಾಘನೀಯವಾದ ನಿರ್ಧಾರವಾಗಿದೆ. ಇದರಿಂದ ಹವ್ಯಕ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಅಧ್ಯಯನ, ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಚ್ಚಿನ ಉತ್ತೇಜನ ದೊರೆಯಲಿದೆ.

ಒಟ್ಟಿನಲ್ಲಿ ಈ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದ್ದು, ಸರ್ವರ ಸಬಲೀಕರಣದ ಮೂಲಕ ನವ ಕರ್ನಾಟಕ ನಿರ್ಮಾಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ   ಶಿವರಾಮ ಹೆಬ್ಬಾರ್ , ಶಾಸಕರು ,ಯಲ್ಲಾಪುರ

ವಿಧಾನಸಭಾ ಕ್ಷೇತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಜನಸ್ನೇಹಿ ಬಜೆಟ್ ಸರ್ವವ್ಯಾಪಿ ಸರ್ವಸ್ಪರ್ಶಿ ಆಯವ್ಯಯ ಆಗಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ದಶಕಗಳ ಕನಸು ನನಸಾಗಿಸಿದ್ದಾರೆ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಘೋಷಿಸಿರುವುದು ಜಿಲ್ಲೆಯ ಜನತೆಯ ಸೌಭಾಗ್ಯವಾಗಿದೆ. ಸಮಸ್ತ ಜಿಲ್ಲೆಯ ಜನತೆಯ ಪರವಾಗಿ ರಾಜ್ಯ ಸರ್ಕಾರಕ್ಕೆ ಅಭಿನಂದಿಸುತ್ತೇನೆ. ವಿ.ಎಸ್ ಭಟ್, ಯಲ್ಲಾಪುರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ.

ಹೊಸ ಲೆಕ್ಕ… ಹಳೇ ಮೋಸ! ಯುವನಿಧಿ ಯೋಜನೆಗೆ ಹಣವಿಲ್ಲ ಎನ್ನುವುದಾದರೆ, ಅಂದು ಕಾಂಗ್ರೆಸ್ ನೀಡಿದ ಭರವಸೆಗಳು ಕೇವಲ ಮತ ಪಡೆಯುವುದಕ್ಕಾ?

ಯುವಕರನ್ನು ನಿರುದ್ಯೋಗಿಗಳನ್ನಾಗಿ ಇಡುವುದೇ ಸಿದ್ದರಾಮಯ್ಯ ಸರ್ಕಾರದ ಹೊಸ ಲೆಕ್ಕ ಇರಬೇಕು! ಭರವಸೆ ನಂಬಿದ ಯುವಕರಿಗೆ ಈಗ ಸಿಕ್ಕಿದ್ದು ಕೇವಲ ಶೂನ್ಯ ಭಾಗ್ಯ. ಯುವನಿಧಿ ಹೆಸರಲ್ಲಿ ಯುವಕರನ್ನು ಮರಳು ಮಾಡಿ, ಈಗ ಹಣವನ್ನೇ ಮೀಸಲಿಡದೆ ಸಿದ್ದರಾಮಯ್ಯನವರು ಬೆನ್ನಿಗೆ ಚೂರಿ ಹಾಕಿದ್ದಾರೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್-ಕರ್ನಾಟಕ ಸರ್ಕಾರ ಎಂದರೆ ಕೇವಲ ಸುಳ್ಳುಗಳ ಸರಮಾಲೆ ಎಂಬುದು ಈ ಬಜೆಟ್ ಮೂಲಕ ಮತ್ತೊಮ್ಮೆ ಸಾಬೀತಾಗಿದೆ. ಪ್ರಸಾದ್ ಹೆಗಡೆ,ಯಲ್ಲಾಪುರ ಬಿಜೆಪಿ ಮಂಡಲಾಧ್ಯಕ್ಷ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

” ಗೆಲಾಕ್ಸಿ ಹಬ್” ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್. ಗಣಪತಿ ಹಬ್ಬದ ಧಮಾಕ ಸೇಲ್..ಸೇಲ್..ಸೇಲ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ರಸ್ತೆಯ …

Leave a Reply

Your email address will not be published. Required fields are marked *