Breaking News

ವಿವೇಚನೆ ಇಲ್ಲದೆ ಬಳಸುವ ಪ್ಲಾಸ್ಟಿಕ್ ಮಾರಕ ಮಾನವ ಬದುಕಿನ ಅಂತ್ಯಕ್ಕೆ ಕಾರಣ- ರೇಮಂಡ್ ಫರ್ನಾಂಡೀಸ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಪ್ರಕೃತಿಯಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಇಂದು ಅನವಶ್ಯಕವಾದ ತೊಂದರೆಗಳನ್ನು ಮಾನವನು ಎದುರಿಸುವಂತಾಗಿದೆ. ಸರಿಯಾಗಿ ವಿವೇಚನೆ ಇಲ್ಲದೆ ಬಳಸುವ ಈ ಪ್ಲಾಸ್ಟಿಕ್ ನಿಂದ ಮನುಷ್ಯನ ಬದುಕು ಕೊನೆಗೊಳ್ಳುವ ಹಂತಕ್ಕೆ ಬರುತ್ತದೆ. ಈಗಲಾದರೂ ಎಚ್ಚೆತ್ತುಕೊಂಡು ಸಮಸ್ಯೆಯನ್ನ ಪರಿಹರಿಸಿಕೊಳ್ಳದಿದ್ದರೆ ಹಾಗೂ ಪ್ಲಾಸ್ಟಿಕ್ ಅನ್ನು ಸರಿಯಾಗಿ ಬಳಸದೆ ಇದ್ದರೆ ಅದು ಮುಂದಿನ ದಿನಗಳಲ್ಲಿ ಮನುಷ್ಯನ ನಾಶಕ್ಕೆ ಕಾರಣವಾಗುವುದು ಎಂದು ಹೋಲಿ ರೋಜರಿ ಪ್ರೌಢಶಾಲೆಯ ಮುಖ್ಯ ಅಧ್ಯಕ್ಷರಾದ ಆದ ರೇಮಂಡ್ ಫರ್ನಾಂಡಿಸ್ ಹೇಳಿದರು.


ಅವರು ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮಾಲಿನ್ಯದ ಕುರಿತು ಭಾಷಣ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.


ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಹೋಲಿ ರೋಜರಿ ಪ್ರೌಢಶಾಲೆಯ ವಿಜ್ಞಾನ ಘಟಕ ಹಾಗೂ ಇಕೋ ಕ್ಲಬ್ಬಿನ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವೇದಿಕೆಯಲ್ಲಿ ಚಂದ್ರಶೇಖರ್, ಜಗದೀಶ್ ಭಟ್, ಹಾಗೂ ನೆಲ್ಸನ್ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಚಾಲಕರಾದ ಎಂ ರಾಜಶೇಖರ್ ಕಾರ್ಯಕ್ರಮ ಸ್ವಾಗತಿಸಿ ನಿರ್ವಹಿಸಿದರು.ಇಕೋ ಕ್ಲಬನ ಸಂಚಾಲಕರಾದ ವೆಂಕಟರಮಣ ಭಟ್ ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *