Breaking News

ಪ್ಲಾಸ್ಟಿಕ್ ಬಳಕೆ ಅಳಿಸುವ ಪ್ರತಿಜ್ಞೆ ನಾವು ಮಾಡಬೇಕಿದೆ- ಎಂ.ಎಲ್‌.ಸಿ ಶಾಂತಾರಾಮ್ ಸಿದ್ದಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಯಲ್ಲಾಪುರ : ಪರಿಸರ ಮಾಲಿನ್ಯದಿಂದ ಅಧಿಕಗೊಳ್ಳುತ್ತಿರುವ ಆಮ್ಲಜನಕದ ಕೊರತೆಯನ್ನು ನೀಗಿಸುವ ಪರೋಪಕಾರ ಕಾರ್ಯ ಮರಗಿಡಗಳಿಂದ ಮಾತ್ರ ನೈಸರ್ಗಿಕವಾಗಿ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ನಾವು ಪ್ರತಿವರ್ಷ ವನಮಹೋತ್ಸವದ ಹೆಸರಿನಲ್ಲಿ ನೆಡುವ ಗಿಡಗಳನ್ನು ಬದುಕಿಸುವ ಕಾರ್ಯವೂ ಅತ್ಯಂತ ಮಹತ್ವದ್ದು. ನೆಟ್ಟ ಗಿಡಗಳನ್ನು ಬೆಳೆಸುವ, ಉಳಿಸುವ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಅಳಿಸುವ ಪ್ರತಿಜ್ಞೆ ನಮ್ಮದಾಗಬೇಕಿದ್ದು, ವಿವಿಧ ಇಲಾಖೆಗಳ ಸಮನ್ವಯತೆಯಿಂದ ಮಾತ್ರ ಇಂತಹ ಕಾರ್ಯಕ್ರಮಗಳ ಉದ್ದೇಶ ಹಾಗೂ ಗುರಿಗಳು ಯಶಸ್ಸುಗಳಿಸಲು ಸಾಧ್ಯ. ನಾವು ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ಕಾಣುತ್ತಿದ್ದ ದಟ್ಟ ಕಾಡುಗಳ ಅನೇಕ ಪ್ರದೇಶಗಳು ಇಂದು ಬಹುತೇಕ ಜಮೀನುಗಳಾಗಿ ಪರಿವರ್ತನೆ ಹೊಂದುತ್ತಿದ್ದು, ಇದಕ್ಕೆ ಯಾರು ಕಾರಣರು ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು.


ಅವರು ತಾಲೂಕಿನ ಉಮ್ಮಚಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಜೀವನ ವಿಕಾಸ ಟ್ರಸ್ಟ್ ಯಲ್ಲಾಪುರ, ವನವಾಸಿ ಕಲ್ಯಾಣ ಕರ್ನಾಟಕ ಹಾಗೂ ಶಾಲಾಭಿವೃದ್ಧಿ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ `ವೃಕ್ಷಾರೋಪಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ’ವನ್ನು ಶಾಲಾ ಆವಾರದಲ್ಲಿ ಗಿಡ ನೆಟ್ಟು, ಗಿಡಗಳಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.


ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಅಧ್ಯಕ್ಷೆ ರೂಪಾ ಪೂಜಾರಿ, ಅತಿಥಿಗಳಾಗಿದ್ದ ಎ.ಸಿ.ಎಫ್ ಹಿಮವತಿ ಭಟ್ಟ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾತನಾಡಿದರು.


ಇಂದ್ರಾಣಿ ಭಟ್ಟ ಸಂಗಡಿಗರ ಪ್ರಾರ್ಥನೆ ಹಾಗೂ ಕಾವ್ಯಾ ಸಂಗಡಿಗರ ಪರಿಸರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯಾಧ್ಯಾಪಕ ನಾರಾಯಣ ನಾವಡ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರಾದ ಗಜಾನನ ಭಟ್ಟ ನಿರ್ವಹಿಸಿದರು. ವಿದ್ಯಾ ಗೌಡರ್ ವಂದಿಸಿದರು. ಗ್ರಾ.ಪಂ ಸದಸ್ಯ ಕುಪ್ಪಯ್ಯ ಪೂಜಾರಿ, ಉಪ ವಲಯಾರಣ್ಯಾಧಿಕಾರಿಗಳಾದ ಸಂತೋಷ ಪವಾರ್, ವಿರಾಜ ನಾಯಕ, ಅರಣ್ಯ ಪಾಲಕ ಶಂಕರ, ಎಸ್.ಡಿ.ಎಂ.ಸಿ ಸದಸ್ಯ ನಾಗೇಶ ವಡ್ಡರ್ ಮತ್ತಿತರರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *