


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ.
ಪ್ರತಿಧ್ವನಿ,ಯಲ್ಲಾಪುರ : ರೋಗ ಬರದದಂತೆ ಮುಂಜಾಗ್ರತೆ ವಹಿಸುವುದು ಆರೋಗ್ಯ ಕಾಪಾಡಿಕೊಳ್ಳುವ ಮೊದಲ ಕ್ರಮವಾಗಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ರೋಗಗಳ ಹರಡುವಿಕೆಯನ್ನು ತಡೆಗಟ್ಟುವ ಕುರಿತು ವ್ಯಾಪಕವಾಗಿ ಎಲ್ಲರಲ್ಲು ಜಾಗೃತಿ ಮೂಡಿಸಬೇಕಿದೆ. ನಮ್ಮ ಜೀವನ ಶೈಲಿಯಲ್ಲಿ ಒಂದಷ್ಡು ಸ್ವಚ್ಚತೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕಿದ್ದು ನಿಮ್ಮ ನಿಮ್ಮ ಶಾಲೆಗಳಲ್ಲಿ ಮಕ್ಕಳಲ್ಲಿ ಆರೋಗ್ಯವಂತ ಸಮಾಜದ ಪರಿಕಲ್ಪನೆ ತುಂಬಬೇಕಿದೆ ಎಂದು ತಾಲೂಕು ಆಸ್ಪತ್ರೆ ವೈದ್ಯೆ ಡಾ, ಸೌಮ್ಯ ಕೆ.ವಿ ಹೇಳಿದರು.
ಅವರು ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆ ಸಭಾ ಭವನದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಆರೋಗ್ಯ ಇಲಾಖೆ ಮತ್ತು ವಿಜ್ಞಾನ ಪರಿಷತ್ ಹಾಗು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿಜ್ಞಾನ ಶಿಕ್ಷಕರಿಗೆ ಹಮ್ಮಿಕೊಂಡ ಕಾರ್ಯಗಾರದಲ್ಲಿ ಮಾತನಾಡಿದರು.

ಪ್ರತಿ ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ ಗ್ರಾಮ ಆರೋಗ್ಯ ಸಮಿತಿ ನಿರಂತರವಾಗಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಪೂರಕವಾದ ಕಾರ್ಯಕ್ರಮ ರೂಪಿಸುತ್ತಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಜಗದೀಶ್ ಕಮ್ಮಾರ್ ಹೇಳಿದರು.

ಆರೋಗ್ಯ ಪ್ರತಿಯೊಬ್ಬರಿಗು ಬೇಕಿರುವ ವ್ಯವಸ್ಥೆ ಅದರ ಅರಿವು ಮಕ್ಕಳಿರುವಾಗಲೆ ತಲೆಗೆ ತುಂಬಬೇಕಿದೆ ಈ ನಿಟ್ಟಿನಲ್ಲಿ ಪ್ರತಿ ಶಾಲೆಗಳಲ್ಲಿ ಮಕ್ಕಳಿಗೆ ಅನುಕೂಲ ಆಗುವಂತೆ ಅನುಷ್ಟಾನಗೊಳಿಸಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಹೇಳಿದರು.

ತಾಲೂಕಾ ಆರೋಗ್ಯಾಧಿಕಾರಿ ಹಾಗು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ, ನರೇಂದ್ರ ಪವಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಟಿ.ಭಟ್ , ಮಹೇಶ್ ತಾಳಿಕೋಟೆ, ಸಿದ್ದಾರೂಡ ಪಾಟೀಲ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿ ಮತ್ತು ವಿವರಣೆಯನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸಂಚಾಲಕ ಶಿಕ್ಷಕ ಎಂ.ರಾಜಶೇಖರ ನೀಡಿದರು.

ತಾಲೂಕಿನ ಎಲ್ಲಾ ಪ್ರೌಡಶಾಲೆ ವಿಜ್ಞಾನ ಶಿಕ್ಷಕರು ಹಾಗು ಪ್ರಾಥಮಿಕ ಶಾಲೆ ಶಿಕ್ಷಕರು ಭಾಗಹಿಸಿದ್ದರು.

Prathidvani Yellapura