Breaking News

ಯಲ್ಲಾಪುರ ತಾಲೂಕಿನಲ್ಲಿ ನಡೆದ ಜನೋಪಯೋಗಿ ಪಿಂಚಣಿ ಹಾಗು ಕಂದಾಯ ಅದಾಲತ್


ಯಲ್ಲಾಪುರ : ಸರ್ಕಾರದಿಂದ ಸಾರ್ವಜನಿಕರಿಗೆ ಸಲ್ಲುತ್ತಿರುವ ಪಿಂಚಣಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಹಾಗೂ ಬಹುಮುಖ್ಯವಾಗಿ ಪಿಂಚಣಿ ಬರುವುದೆಂಬ ಮಾಹಿತಿಯೇ ಇಲ್ಲದವರು ಅದಾಲತ್‌ನಲ್ಲಿ ಬಂದು ಹೊಸದಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಪಿಂಚಣಿಯು 65 ವರ್ಷಗಳವರೆಗೆ 600 ರೂ ಇದ್ದು ನಂತರದಲ್ಲಿ 1200 ರೂ ಪಡೆಯಬಹುದಾಗಿದೆ. ಆದರೆ ಅದಕ್ಕೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಿದ್ದು ಅದರ ಪ್ರಯೋಜನವನ್ನೂ ಅದಾಲತ್‌ನಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ್ ಹೇಳಿದರು.


ಅವರು ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾಡಳಿತ ಉತ್ತರಕನ್ನಡ, ತಾಲೂಕಾಡಳಿತ ಯಲ್ಲಾಪುರ ಇದರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪಿಂಚಣಿ ಅದಾಲತ್ ಹಾಗೂ ಕಂದಾಯ ಅದಾಲತ್‌ನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾಹಿತಿ ನೀಡಿದರು.


ಕಂದಾಯ ಅದಾಲತ್‌ನಲ್ಲಿ ರೈತರಿಗೆ ಹೆಚ್ಚಿನ ಅನುಕೂಲವಿದ್ದು ತಮ್ಮ ಪಹಣಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವುದು , ಇನ್ನಿತರೆ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಲು ಅವಕಾಶವಿದ್ದು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದರು.


ಜು. 5 ರ ಬುಧವಾರ ತಾಲೂಕಿನ ಹಾಸಣಗಿ ಮತ್ತು ಯಲ್ಲಾಪುರದಲ್ಲಿ ಪಿಂಚಣಿ ಅದಾಲತ್ ನಡೆಯಿತು. ಮಂಚಿಕೇರಿ ಹೋಬಳಿಯಲ್ಲಿ ೪೮ ಸಾರ್ವಜನಿಕರು ಹಾಜರಿದ್ದು 32 ಮಂಜೂರಿ ಪತ್ರವನ್ನು ವಿತರಿಸಲಾಯಿತು. ಅದಾಲತ್‌ನಲ್ಲಿ ಪಿಂಚಣಿಗೆ ಸಂಬಧಿಸಿದ 2 ಅರ್ಜಿ ಸ್ವೀಕರಿಸಲಾಯಿತು. ಯಲ್ಲಾಪುರ ಹೋಬಳಿಯಲ್ಲಿ 98 ಸಾರ್ವಜನಿಕರು ಹಾಜರಿದ್ದು 65 ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಪಿಂಚಣಿಗೆ ಸಂಬಧಿಸಿದಂತೆ 14, ಕಂದಾಯಕ್ಕೆ ಸಂಬಂಧಿಸಿದಂತೆ 1 ಒಟ್ಟು 15 ಅರ್ಜಿಗಳನ್ನು ಸ್ವೀಕರಿಸಲಾಯಿತು.


ಗ್ರೇಡ್-2:ತಹಸೀಲ್ದಾರ ಸಿ.ಜಿ ನಾಯ್ಕ ಹಾಗೂ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು , ಕಂದಾಯ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *