Breaking News

ಯಲ್ಲಾಪುರ ಲಯನ್ಸ್ ಕ್ಲಬ್ ಲ,ಸುರೇಶ್ ಬೋರ್ಕರ್ ಗೆ ಗೋವಾದಲ್ಲಿ ಪ್ರಶಸ್ತಿ ಪ್ರಧಾನ.


ಪ್ರತಿಧ್ವನಿ ಯಲ್ಲಾಪುರ : ಸರ್ಕಾರಿ ನೌಕರಿಯಿಂದ ನಿವೃತ್ತಿ ಆದವರೆ ಯಲ್ಲಾಪುರ ಲಯನ್ಸ್ ಕ್ಲಬ್ ಸೇರಿ ಸೇವಾ ಕ್ಷೇತ್ರ ಆಯ್ದುಕೊಂಡ ಲಯನ್,ಸುರೇಶ್ ಬೋರ್ಕರ್ ಅವರಿಗೆ ನೆರೆ ರಾಜ್ಯ ಗೋವಾದಲ್ಲಿ ನಡೆದ ಲಯನ್ಸ್ ಕ್ಲಬ್ ಅದ್ದೂರಿ ಕಾರ್ಯಕ್ರಮ 2025-26 ನೆ ಸಾಲಿನ “ಡಿಸ್ಟಿಕ್ 317 B ನ ಅವಾಡ್೯ ಕಾರ್ಯಕ್ರಮದಲ್ಲಿ “out standing zone chairperson” ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಡಿಸ್ಟಿಕ್ ಗೌರ್ನರ್ ಲಯನ್ ಪಿಎಂಜೆಎಫ್,ಜಯಮುಲ್ ನಾಯ್ಕ್ ಹಾಗು ಪಿಎಂಜೆಎಫ್ ಲಯನ್ ಡಾ,ಕೀರ್ತಿ ನಾಯ್ಕ ಪ್ರಶಸ್ತಿ ಪ್ರಧಾನ ಮಾಡಿದರು.


ಝೋನಲ್ ಛೇರಪರ್ಸನ್ ಲಯನ್ ಸುರೇಶ್ ಬೋರ್ಕರ್ ಈಗಾಗಲೆ ಉತ್ತಮ ಪ್ರೆಸಿಡೆಂಟ್ ಅವಾಡ್೯ ,outstanding lions club award ಪಡೆದಿದ್ದು ಇದೀಗ ಮತ್ತೊಂದು ಪ್ರಶಸ್ತಿ ಅವರನ್ನು ಹರಸಿ ಬಂದಿದೆ.


ಉತ್ತಮ ಸೇವೆ ಸಲ್ಲಿಸುತ್ತಾ ಸಂಸ್ಥೆಯಲ್ಲಿ ಉತ್ತಮ ಪ್ರಶಸ್ತಿಗಳನ್ನು ಗಳಿಸುತ್ತಾ ಸಾಗುತ್ತಿರುವ ಲಯನ್ ಸುರೇಶ್ ಬೋರ್ಕರ್ ಅವರಿಗೆ ಅಭಿನಂದನೆಗಳ ಮಹಾಪೂರವೆ ಹರಿದು ಬರುತ್ತಿದೆ.
ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ಸಹ ಅವರ ಸಾಧನೆಗೆ ಮತ್ತು ಗಳಿಸಿದ ಯಶಸ್ಸಿಗೆ ಶುಭಕೋರಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *