Breaking News

ಯಲ್ಲಾಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಗುರು ಗೌರವಾರ್ಪಣೆ ಕಾರ್ಯಕ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ದೇವರ ಸ್ಥಾನದಲ್ಲಿ ಕಾಣುವ ಅತ್ಯಂತ ಪರಮ ಪವಿತ್ರ ವೃತ್ತಿ ಶಿಕ್ಷಕ ವೃತ್ತಿಯಾಗಿದೆ. ಡಾಕ್ಟರ್, ವಕೀಲರು,ವಿಜ್ಞಾನಿಗಳು,ಇಂಜನಿರ್, ಉಪನ್ಯಾಸಕ ಇತರೆ ಯಾವುದೇ ಸ್ಥಾನ ಹೊಂದಲು ಮೂಲ ಕಾರಣ ಮೊದಲು ಶಿಕ್ಷಕ. ವಿಶೇಷವಾಗಿ ನನ್ನ ಕ್ಷೇತ್ರದಲ್ಲಿ ದೇವ ದುರ್ಲಭ ಶಿಕ್ಷಕರಿರುವುದು ಹೆಮ್ಮೆಯ ಸಂಗತಿಯಾಗಿದೆ. ದಿವಂಗತ ಮಾಜಿ ರಾಷ್ಟ್ರಪತಿ ಡಾ,ಸರ್ವಪಲ್ಲಿ ರಾಧಾಕೃಷ್ಣ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮತ್ತಷ್ಟು ಸಂಸ್ಕಾರವಂತ ಪ್ರಜೆಗಳನ್ನು ಸಮಾಜಕ್ಕೆ ಒಪ್ಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಶಿಕ್ಷಕರ ದಿನದ ಶುಭಾಶಯಗಳು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.


ಅವರು ಪಟ್ಟಣದ ವೆಂಕಟರಮಣ ಮಠದಲ್ಲಿ ದಿ,ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮ ದಿನ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಡಾ,ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.


ಪ್ರಸಕ್ತ ಸಾಲಿನಲ್ಲಿ ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಮತ್ತು ನಿವೃತ್ತಿ ಹೊಂದಿದ ಶಿಕ್ಷಕರು ಹಾಗು ಶಿಕ್ಷಣ ಇಲಾಖೆಯ ಸಿಬ್ಬಂದಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ನಿವೃತ್ತ ಪ್ರಾಚಾರ್ಯ ಕೆ.ಎನ್.ಹೊಸಮನಿ ಅವರಿಂದ ವಿಶೇಷ ಉಪನ್ಯಾಸ ಆಯೋಜನೆ ಮಾಡಲಾಗಿತ್ತು.


ವೇದಿಕೆಯಲ್ಲಿ ರಾಜ್ಯ ವಿಕೇಂದ್ರಿಕರಣ ಯೋಜನಾ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ತಾಲೂಕು ದಂಡಾಧಿಕಾರಿ ಗುರುರಾಜ್, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಅಕ್ಷರ ದಾಸೋಹ ಸಮನ್ವಯಾಧಿಕಾರಿ ಶ್ರೀರಾಮ್ ಹೆಗಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆರ್.ಆರ್.ಭಟ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯ್ಕ, ಅಂಕೋಲಾ ಅರ್ಬನ್ ಬ್ಯಾಂಕ್ ಪ್ರಮುಖ ಬಾಸ್ಕರ ನಾರ್ವೇಕರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚಂದ್ರಶೇಖರ ಎಸ್.ಸಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದು ಮತನಾಡಿ ಶುಭಕೋರಿದರು.


ಶಿಕ್ಷಕರ ಸಮಸ್ಯೆಗಳ ಕುರಿತು ಶಾಸಕ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಹೆಬ್ಬಾರ್ ಮನವಿ ಸ್ವೀಕರಿಸಿ ತನ್ನ ಪ್ರಾಮಾಣಿಕ ಪ್ರಯತ್ನದೊಂದಿಗೆ ಶಿಕ್ಷಣ ಸಚಿವರಲ್ಲಿ ಚರ್ಚಿಸಿ ಬಗೆಹರಿಸುವುದಾಗಿ ತಿಳಿಸಿದರು.

ತಾಲೂಕಿನ ಎಲ್ಲಾ ಶಿಕ್ಷಕರು, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸಿಬ್ಬಂದಿಗಳು , ಸಾರ್ವಜನಿಕರು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *