Breaking News

ತಾಯಿ ಭಾಷೆಯನ್ನು ಪ್ರೀತಿಸಿ, ಕನ್ನಡವನ್ನು ಗೌರವಿಸಿ – ಬಿ.ಎನ್.ವಾಸರೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ನೀವು ಎಷ್ಟೇ ದೊಡ್ಡ ಹುದ್ದೆಯಲ್ಲಿದ್ದರೂ ಮೊದಲು ಎಲ್ಲರನ್ನೂ ಪ್ರೀತಿಸುವ ಮನುಷ್ಯರಾಗಿ, ತಾಯಿ ಭಾಷೆಯನ್ನು ಪ್ರೀತಿಸಿ, ಕನ್ನಡವನ್ನು ಗೌರವಿಸಿ. ಸಾಗರಾದಾಚೆಯೂ ಕಸಾಪ ತನ್ನ ಸಂಘಟನೆ ಆರಂಭಿಸುವ ಮೂಲಕ ವಿದೇಶ ನೆಲಕ್ಕೂ ಕಾಲಿಟ್ಟಿದೆ ‘ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ನಾಡು, ನುಡಿಯ ಸಂಘಟನೆಗಳಿದ್ದರೂ. ಶತಮಾನದಿಂದ ನಾಡು ನುಡಿಯ ರಕ್ಷಣೆಗೆ ಟೊಂಕ ಕಟ್ಟಿ ನಿಂತು, ಕನ್ನಡದ ಅಸ್ಮಿತೆಗೆ ಧಕ್ಕೆ ಬಂದಾಗ ಎದೆಗುಂದದೇ ನೇರವಾಗಿ ಹೋರಾಟ ನಡೆಸಿದ ಸಾಧನೆ ಕನ್ನಡ ಸಾಹಿತ್ಯ ಪರಷತ್ತಿನದ್ದು ಮಾತ್ರ’ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಹೇಳಿದರು.


ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಹಮ್ಮಿಕೊಂಡ ನಿವೇದನಾ ಒಡಂಬಡಿಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಕಸಾಪ ಅಧ್ಯಕ್ಷ ಬಿ,ಎನ್.ವಾಸರೆ ಹಾಗೂ ಪ್ರಾಂಶುಪಾಲ ಡಿ.ಎಸ್.ಭಟ್ಟ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ವರ್ಷವಿಡೀ ಕನ್ನಡದ ಕಾರ್ಯಕ್ರಮ ಹಮ್ಮಿಕೊಳ್ಳುವ, ಅದಕ್ಕೆ ಸಹಕಾರ ನೀಡುವ ನಿವೇದನಾ ಒಡಂಬಡಿಕೆಯನ್ನು ಹಸ್ತಾಂತರಿಸಿಕೊಂಡರು.
ಒಡಂಬಡಕೆ ನಿರೂಪಿಸಿದ ಉಪನ್ಯಾಸಕಿ ಸವಿತಾ ನಾಯಕ ಮಾತನಾಡಿ, ಸಾಹಿತ್ಯ ಸಂವೇದನೆ, ಕನ್ನಡ, ಸಾಹಿತ್ಯಿಕ ಕಾರ್ಯಕ್ರಮ, ಭಾಷಾಂತರ, ಪತ್ರಿಕೋದ್ಯಮ, ತಾಂತ್ರಿಕ, ಸ್ಪರ್ಧಾತ್ಮಕ ಪರೀಕ್ಷೆ ಇವುಗಳಲ್ಲಿ ಕನ್ನಡದ ಬಳಕೆಯ ಕುರಿತು ಉತ್ತೇಜನ ಮುಂತಾದ ೭ ವಿಷಯಗಳನ್ನು ಒಳಗೊಂಡಿದೆ ಎಂದರು.


‘ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದ ಕೌಶಲ್ಯ’ ಕುರಿತು ಅಂಕೋಲಾ ಶ್ರೀ ರಾಮ ಸ್ಟಡಿ ಸರ್ಕಲ್ ನಿರ್ದೇಶಕ, ವಕೀಲ ಸೂರಜ ನಾಯ್ಕ ಉಪನ್ಯಾಸ ನೀಡಿದರು.


ತಾಲೂಕು ಕಸಾಪ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ, ಹಾಗೂ ನಿವೃತ್ತ ಪ್ರಾಂಶುಪಾಲ ಶ್ರೀರಂಗ ಕಟ್ಟಿ ಮಾತನಾಡಿದರು, ಪ್ರಾಂಶುಪಾಲ ಡಿ.ಎಸ್.ಭಟ್ಟ ಅಧ್ಯಕ್ಷತೆ ವಹಿಸಿದ್ದರು.
ನಮೃತಾ ಹೆಬ್ಬಾರ್ ಪ್ರಾರ್ಥಿಸಿದರು, ಉಪನ್ಯಾಸಕ ರಾಮಕೃಷ್ಣ ಗೌಡ ಸ್ವಾಗತಿಸಿ, ವಂದಿಸಿದರು, ಆಶಾ ಬೆಳ್ಳೆನವರ್ ನಿರೂಪಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *