Breaking News

ಯಲ್ಲಾಪುರದಲ್ಲಿ ಬಿಜೆಪಿ ಸೇವಾ ಜ್ಯೋತಿ ನಿಮಿತ್ತ,ವಿಕಸಿತ ಭಾರತ ಸಂಕಲ್ಪ ಸಭೆ – ಮಹಿಳಾ ಮೋರ್ಚದಿಂದ ಕಮಲದೀಪ

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ತಿಲಕ್ ಚೌಕ್ ನಲ್ಲಿ ಬಿಜೆಪಿ ವತಿಯಿಂದ ಸೇವಾಜ್ಯೋತಿ ಕಾರ್ಯಕ್ರಮದ ನಿಮಿತ್ತ ವಿಕಸಿತ ಭಾರತ ಸಂಕಲ್ಪ ಸಭೆ ಹಾಗು ಮಹಿಳಾ ಮೊರ್ಚ ಅಡಿಯಲ್ಲಿ ಕಮಲದೀಪ ಮತ್ತು ಕಮಲ ನಮನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ದೇಶದ ಪ್ರದಾನಿ ನರೇಂದ್ರ ಮೋದೀಜೀ ಯವರ ಸಾಧನೆಗಳ ಬಗ್ಗೆ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಭಟ್ಟ,ಹಿರಿಯ ನಾಯಕಿ ಶ್ಯಾಮಿಲಿ ಪಾಟಣಕರ, ಮಾತನಾಡಿದರು.

ರಾಜ್ಯ ವಕ್ತಾರರಾದ ಹರಿಪ್ರಕಾಶ ಕೋಣೆಮನೆ ಕಾರ್ಯಕ್ರಮ ಕ್ಕೆ ಶುಭಕೋರಿದರು.ಪಕ್ಷದ ಹಿರಿಯ ‌ನಾಯಕಿ,ಮತ್ತು ಸಂಘಟಕರಾದ‌ನಮಿತಾ ಬೀಡೀಕರ ಅವರಿಗೆ ಪಕ್ಷದ ವತಿಯಿಂದ ಗೌರವಿಸಲಾಯಿತು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ ಸ್ವಾಗತಿಸಿದರು.ಮಂಡಳ ಪ್ರಧಾನ ಕಾರ್ಯದರ್ಶಿ ನಟರಾಜ ಗೌಡ,ಜಿಲ್ಲಾ ವಿಶೇಷ ಕಾರ್ಯಕಾರಣಿ ಸದಸ್ಯ ರಾಘವೇಂದ್ರ ಭಟ್ಟ,ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮೇಶ್ವರ ನಾಯ್ಕ,ಯುವಮೋರ್ಚಾ ಅಧ್ಯಕ್ಷ ರಜತ ಬದ್ದಿ,ಪಕ್ಷದ ಪಧಾಧಿಕಾರಿಗಳಾದ ರಾಮಣ್ಣ ಚಿಕ್ಯಾನಮನೆ,ಪ್ರದೀಪ ಯಲ್ಲಾಪುರಕರ,ರವಿ ದೇವಡಿಗ,ಜಿ.ಆರ್. ಭಾಗ್ವತ,ಸುಬ್ಬಣ್ಣ ಭೋಳ್ಮನೆ,ಗಜಾನನ ನಾಯ್ಕ,ಮಹಭಲೇಶ್ವರ ಭಟ್ಟ,ವಿನೀಷ್ ಭಟ್ಟ,ಗಣೇಶ ಹೆಗಡೆ,ಸದಾನಂದ ಮರಾಠಿ,ತುಲಸಿದಾಸ ನಾಯ್ಕ,ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *