Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 4 ಲಕ್ಷ ಕೋಟಿ ಬಜೆಟ್ ಉತ್ತಮವೆಂದ ರಾಮು ನಾಯ್ಕ್, ಜನಪರವೆಂದ ಡಿ.ಎನ್.ಗಾಂವ್ಕರ್

ಯಲ್ಲಾಪುರ : ರಾಜ್ಯದಲ್ಲಿ ಎಲ್ಲೆಲ್ಲು ಬಜೆಟ್ ನದ್ದೆ ಹವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದು ಗ್ಯಾರಂಟಿ ಯೋಜನೆಗಳ ನಡುವೆ 4 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದು ಹಲವು ಅಭಿಪ್ರಾಯಗಳು ವ್ಯಕ್ತವಾಗಿವೆ.

ಕೆಲವರು ಅದ್ಬುತ ಜನಪರ ಉತ್ತಮ ಬಜೆಟ್ ಎಂದು ಹಾಡಿ ಹೊಗಳಿದರೆ ಮತ್ತೆ ಕೆಲವರು ಇದೊಂದು ಸಪ್ಪೆ ಮತ್ತು ದೂರದೃಷ್ಟಿ ಇಲ್ಲದ ಸಪ್ಪೆ ಅಭಿವೃದ್ಧಿ ವಿರೋದಿ ಬಜೆಟ್ ಎನ್ನುತ್ತಿದ್ದಾರೆ.

  ಅದೇನೆ ಇರಲಿ ಯಲ್ಲಾಪುರ ತಾಲೂಕಿನ ಮಟ್ಟಕ್ಕೆ ಹಿರಿಯ ಬಿಜೆಪಿ ನಾಯಕ ರಾಮುನಾಯ್ಕ್ ಪಕ್ಷಬೇಧ ಮರೆತು ಬಜೆಟ್ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನಪರ ಬಜೆಟ್ ಇದಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್ ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ  ಡಿ‌.ಎನ್ ಗಾಂವ್ಕರ್ ಬಡವರ ಜನಪರ ಆಡಳಿತಕ್ಕೆ ಹೆಸರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಸಹ ಜನರ ಪರವಾಗಿಯೆ ಇದೆ ಇಂತಹ  ಯಶಸ್ವಿಪೂರ್ಣ ಬಜೆಟ್ ಇದಾಗಿದೆ ಎಂದರು.‌

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *