Breaking News

ಯಲ್ಲಾಪುರದ ಕುಂದರಗಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿದ ಶಾಸಕ ಹೆಬ್ಬಾರ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸರ್ಕಾರದ ಅಡಿಯಲ್ಲಿ ಮಂಜೂರಾಗುವ ಸವಲತ್ತಿನೊಂದಿಗೆ ಹಲವು ಖಾಸಗಿ ಕಂಪನಿಗಳ ಸಿಎಸ್ಆರ್ ಫಂಡ್ ಸಹಕಾರದೊಂದಿಗೆ ಶಿಕ್ಷಣಕ್ಕೆ ಬೇಕಾದ ಸವಲತ್ತುಗಳನ್ನು ಪೂರೈಸಲಾಗುತ್ತಿದೆ.ಒದಗಿಸಿದ ಕೊಠಡಿಗಳಾಗಲಿ ಇನ್ನಿತರ ಸವಲತ್ತುಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಉತ್ತಮವಾಗಿ ನಿರ್ವಹಣೆ ಮಾಡಬೇಕಿದೆ ಎಂದು ಯಲ್ಲಾಪುರ ಮುಂಡಗೋಡು ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.


ಅವರು ರವಿವಾರ ತಾಲೂಕಿನ ಕುಂದರಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಸಂಪೆಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಿವೇಕ ಯೋಜನೆ ಅಡಿಯಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿ ಹೇಳಿದರು


ಈ ಸಂದರ್ಭದಲ್ಲಿ ಶಿಕ್ಷಕರು,ಎಸ್.ಡಿ.ಎಮ್.ಸಿ ಸಮಿತಿಯ ಪದಾಧಿಕಾರಿಗಳು ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *