Breaking News

ಮರು ಮೌಲ್ಯಮಾಪನದಲ್ಲಿ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ಗೌತಮಿಗೆ ಹದಿನೇಳು ಅಂಕ ಲಭ್ಯ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಏಪ್ರಿಲ್ 2024 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿನಿ ಈರಾಪುರದ ಗೌತಮಿ ಕೋಮಾರ 88.16 % ಗಳಿಸಿದ್ದು ಅಂಕಗಳು ಕಡಿಮೆ ಬಂದ ಕಾರಣ ಮರು ಮೌಲ್ಯಮಾಪನಕ್ಕೆ ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದಳು. ಇದೀಗ ಮರು ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡು ಹೆಚ್ಚುವರಿಯಾಗಿ ವಿಜ್ಞಾನ ವಿಷಯದಲ್ಲ್ಲಿ 1೦ ಅಂಕಗಳು ಹಾಗೂ ಹಿಂದಿ ಭಾಷೆಯಲ್ಲಿ 7ಅಂಕಗಳನ್ನು ಗಳಿಸುವ ಮೂಲಕ 90.88% ದಾಖಲಿಸಿ ಸರ್ವೋದಯ ಪ್ರೌಢಶಾಲೆಗೆ ಮೂರನೇ ಸ್ಥಾನ ಪಡೆದಿದ್ದಾಳೆ. ಗೌತಮಿಯ ಸಾಧನೆಗೆ ಸರ್ವೋದಯ ಶಿಕ್ಷಣ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು, ಸಮಿತಿಯ ಸದಸ್ಯರು, ಪ್ರೌಢಶಾಲೆಯ ಮುಖ್ಯಾಧ್ಯಾಪಕರು ಶಿಕ್ಷಕರು ಗ್ರಾಮಸ್ಥರು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *