Breaking News

” ಅನಂತ ನೆನಪು” ಸಂಸ್ಥೆಯ ಶೈಕ್ಷಣಿಕ ಕಳಕಳಿ “ದಿ,ಗುಣವಂತ ನಾಗಪ್ಪ ನಾಯ್ಕ” ನೆನಪಿನಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ, ಯಲ್ಲಾಪುರ : ಸಾಮಾಜಿಕ,ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಸದಾ ಸಮಾಜಮುಖಿ ಸೇವಾಕಾರ್ಯದಲ್ಲಿ ತೊಡಗಿಕೊಂಡ ” ಅನಂತ ನೆನಪು ” ಸಂಸ್ಥೆ ಅಡಿಯಲ್ಲಿ ದಿ, ಗುಣವಂತ ನಾಗಪ್ಪ ನಾಯ್ಕ ನೆನಪಿನಾರ್ಥ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
      ಪಟ್ಟಣದ ಕಾಳಮ್ಮ ನಗರದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪಟ್ಟಣ ಪಂಚಾಯತ ಸದಸ್ಯೆ ಹಾಗು ಅನಂತ ನೆನಪು ಸಂಸ್ಥೆ ಅಧ್ಯಕ್ಷೆ ನರ್ಮದಾ ರವಿ ನಾಯ್ಕ್ ನೋಟ್ ಬುಕ್ಸ್ ವಿತರಿಸಿದರು ಜೊತೆಯಲ್ಲಿ ಸಾಮಾಜಿಕ ಕಾರ್ಯಕರ್ತ ರವಿನಾಯ್ಕ್ ಇಂಜಿನಿಯರ್ ಕಾಳಮ್ಮ ನಗರದ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *