Breaking News

ಯಲ್ಲಾಪುರ ತಾಲೂಕಿನಲ್ಲಿ ಮಳೆಯಿಂದಾದ ಅವಘಡಗಳು – ಸ್ಥಳಕ್ಕೆ ಅಧಿಕಾರಿಗಳ ಭೇಟಿ.


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ರಣ ಮಳೆಗೆ ಹಲವು ಅವಘಡಗಳು ಸಂಭವಿಸಿದೆ.ಅದೃಷ್ಟವಶಾತ್ ಜೀವಹಾನಿ, ಜಾನುವಾರುಗಳಿಗೆ ಹಾನಿ ಸಂಭವಿಸಿಲ್ಲ.


ಕೋಳಿಕೇರಿ ಬಸವಣ್ಣ ನಗರದಲ್ಲಿ ಲಕ್ಷ್ಮೀ ಸುಬ್ಬಾ ಮರಾಠಿ ಬುವರ ವಾಸ್ತವ್ಯದ ಮನೆ ಲಗ್ತಾ ಇರುವ ಶೌಚಾಲಯ ಹಾಗು ಅಡಿಕೆ ತೋಟದ ಮೇಲೆ ಮರದ ಕಾಂಡ ಬಿದ್ದಿದ್ದು ಅದೃಷ್ಟವಶಾತ್ ಜನ ಅಥವಾ ಜಾನುವಾರುಗಳಿಗೆ ತೊಂದರೆಯಾಗಿರುವುದಿಲ್ಲ.


ಬಿಳಕಿ ಗ್ರಾಮದಲ್ಲಿ ಪಿಲ್ಲು ಸಾವೇರ್ ಸಿದ್ದಿ ಎಂಬುವರ ವಾಸದ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ ಜನ ಅಥವಾ ಜಾನುವಾರುಗಳಿಗೆ ಯಾವುದೇ ಹಾನಿ ಸಂಭವಿಸಿರುವುದಿಲ್ಲ.


ಕೋಳಿಕೇರಿ ಸುಭಾಷ್ ಯಲ್ಲಪ್ಪ ಹರಿಜನ ಎಂಬುವರ ಮನೆ ಮೇಲೆ ಮರ ಬಿದ್ದಿದ್ದು ಹಾನಿ ಸಂಭವಿಸಿದೆ ಜನ ಅಥವಾ ಜಾನುವಾರುಗಳಿಗೆ ಯಾವುದೆ ಸಮಸ್ಯೆ ಆಗಿರುವುದಿಲ್ಲ.
ಎಲ್ಲಾ ಅವಘಡಗಳು ಸಂಭವಿಸಿದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದು ವರದಿ ಒಪ್ಪಿಸುತ್ತಿದ್ದಾರೆ.
ಒಟ್ಟಿನಲ್ಲಿ ಮಳೆಗಾಲದ ಪ್ರಾರಂಭದಲ್ಲಿ ಮಳೆಯೆ ಕಾಣದೆ ಕಂಗಾಲಾದ ರೈತರ ಮುಖದಲ್ಲಿ ಮಳೆ ಸುರಿಯುತ್ತಿರುವುದರಿಂದ ಮಂದಹಾಸವಿದೆ. ಕೆರೆಕಟ್ಟೆಗಳು ತುಂಬುವ ಪ್ರಕ್ರಿಯೆ ಆಗುತ್ತಿದ್ದು ಕೆಲವೆಡೆ ಅವಘಡಗಳು ಸಂಭವಿಸಿದೆ.ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *