Breaking News

ಶಿರಸಿ ಜಿಲ್ಲಾ ಪಂಚಾಯತ ಕಚೇರಿ ದಿನಗೂಲಿ ನೌಕರ ಬೈಕ್ ಅಪಘಾತದಲ್ಲಿ ಸಾವು


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ತುಡಗಣಿ ಬ್ರಿಡ್ಜ್ ಸಮೀಪ ಹಾದುಹೋಗಿರುವ ರಾಜ್ಯ ಹೆದ್ದಾರಿ ೯೩ರಲ್ಲಿ ಮೋಟಾರ್ ಸೈಕಲ್‌ನಲ್ಲಿ ಪಯಣಿಸುತ್ತಿದ್ದ ವ್ಯಕ್ತಿಯೋರ್ವ ಸೇತುವೆಗೆ ಬಡಿದು ಅಪಘಾತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ


ತಾಲೂಕಿನ ಚಿಪಗೇರಿಯ ಉಚ್ಛೆಗೇರಿ ನಿವಾಸಿ ಶಿರಸಿಯ ಜಿ.ಪಂ ಕಚೇರಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ ದೇವರು ಭಟ್ಟ(೪೦) ಮೃತಪಟ್ಟ ವ್ಯಕ್ತಿ ಯಾಗಿದ್ದಾನೆ. ಆ.೫ರಂದು ಮೃತವ್ಯಕ್ತಿಯು ಶಿರಸಿ ಕಡೆಯಿಂದ ಯಲ್ಲಾಪುರದ ಕಡೆಗೆ ಮೋಟಾರ್‌ಸೈಕಲ್ ಅನ್ನು ಅತಿವೇಗವಾಗಿ ಚಲಾಯಿಸಿಕೊಂಡು ಬಂದು ನಿಯಂತ್ರಣ ಕಳೆದುಕೊಂಡು ತುಡಗುಣಿ ಸಮೀಪದ ಬ್ರಿಡ್ಜ್ಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿಕೊಂಡವನನ್ನು ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಸುಚಿರಾಯ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ. ಈ ಸಂಬAಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಹೆಸ್ಕಾಂ ಎದುರು ಸಾಮಾಜಿಕ ಕಾರ್ಯಕರ್ತ ತಾರನಾಥ್ ನಾಯ್ಕ್ ಮತ್ತು ತಂಡದಿಂದ ದಿಡೀರ್ ಪ್ರತಿಭಟನೆ.

ಪ್ರತಿಧ್ವನಿ ಯಲ್ಲಾಪುರ :  ಪಟ್ಟಣದ ಹೆಸ್ಕಾಂ ಕಚೇರಿ ಎದುರು ಸಾಮಾಜಿಕ ಕಾರ್ಯಕರ್ತ ತಾರಾನಾಥ ನಾಯ್ಕ್ ನೇತೃತ್ವದಲ್ಲಿ ಅಂಬೇಡ್ಕರ್ ಪರ್ವ ದಲಿತ …

Leave a Reply

Your email address will not be published. Required fields are marked *