
ಪ್ರತಿಧ್ವನಿ ಯಲ್ಲಾಪುರ : ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಪಠ್ಯ ಚಟುವಟಿಕೆ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ.ಕ್ರೀಡೆಯಲ್ಲಿ ನಮ್ಮ ಉತ್ತರ ಕನ್ನಡ ಜಿಲ್ಲೆಯ ಹಲವು ಪ್ರತಿಭೆಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲೆಗೆ ಗೌರವ ತಂದಿದ್ದಾರೆ ಅದೆಲ್ಲವು ಕ್ರೀಡಾಪಟುಗಳಾದ ತಮಗೆಲ್ಲಾ ಸ್ಪೂರ್ತಿಯಾಗಬೇಕಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.


ಅವರು ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ದಸರಾ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಉಲ್ಲಾಸ ಶಾನಭಾಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅಧಿಕಾರಿ ಚಂದ್ರಹಾಸ ನಾಯ್ಕ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.










Prathidvani Yellapura