Breaking News

ಯಲ್ಲಾಪುರದಲ್ಲಿ ಲೋಕ್ ಅದಾಲತ್ ಪೂರ್ವಭಾವಿ ಸಭೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಜುಲೈ ತಿಂಗಳಲ್ಲಿ ಲೋಕ್ ಅದಾಲತ್ ನಡೆಯಲಿದ್ದು ರಾಜಿಯಾಗುವಂತಹ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಇದರಿಂದ ಹಣ, ಸಮಯ ಉಳಿಯುವುದಲ್ಲದೇ ಬಹುಸಮಯದಿಂದ ನಡೆಯುತ್ತಿರುವ ಪ್ರಕರಣಗಳ ಇತ್ಯರ್ಥವಾಗಲಿದೆ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜಿೆ.ಬಿ ಹಳ್ಳಕಾಯಿ ಹೇಳಿದರು.


ಅವರು ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ವಿವಿಧ ಇಲಾಖೆ, ಸಂಘ ಸಂಸ್ಥೆಗಳಿಗೆ ಕರೆಯಲಾಗಿದ್ದ ಲೋಕ್ ಅದಾಲತ್‌ನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಹೇಳಿದರು.


ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಉಪಸ್ಥಿತರಿದ್ದರು. ಸಭೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಶಿವರಾಯ ಎಚ್ ದೇಸಾಯಿ, ಜೀನತ್‌ಬಾನು ಶೇಖ, ತಹಸೀಲ್ದಾರ ಗುರುರಾಜ, ಇಡಗುಂದಿ ವಲಯ ಅರಣ್ಯಾಧಿಕಾರಿ ಶಿಲ್ಪಾ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಫೀಕಾ ಹಳ್ಳೂರು, ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ, ವಕೀಲರ ಸಂಘದ ಅಧ್ಯಕ್ಷರು , ವಕೀಲರಾದ ಸರಸ್ವತಿ ಜಿ ಭಟ್ಟ, ಎನ್.ಕೆ ಭಾಗ್ವತ, ಅಬಕಾರಿ ಪೊಲೀಸರು, ಸಹಕಾರಿ ಸಂಘ ಸಂಸ್ಥೆಗಳ ಪ್ರಮುಖರು , ಬ್ಯಾಂಕ್ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *