
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿನ ಮಂಚೀಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಒಟ್ಟು 59 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟಾರೆ ಕಾಲೇಜು ಫಲಿತಾಂಶ 78% ಫಲಿತಾಂಶ ದಾಖಲಿಸಿದೆ.



ಕಲಾ ವಿಭಾಗದಲ್ಲಿ 29ಕ್ಕೆ 22, ವಾಣಿಜ್ಯ ವಿಭಾಗದಲ್ಲಿ 21 ಕ್ಕೆ 19, ವಿಜ್ಞಾನ ವಿಭಾಗದಲ್ಲಿ ೦9ಕ್ಕೆ ೦5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ
ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಿ.ಜಿ ಹೆಗಡೆ ಸೇರಿದಂತೆ ಎಲ್ಲಾ ಉಪನ್ಯಾಸಕರು ಅಭಿನಂದಿಸಿದ್ದಾರೆ.




Prathidvani Yellapura