Breaking News

ವೈ.ಟಿ.ಎಸ್.ಎಸ್ ಅತ್ಯುತ್ತಮ ಫಲಿತಾಂಶ – 98.15%:

ಪ್ರತಿಧ್ವನಿ ಯಲ್ಲಾಪುರ : ರಾಜ್ಯಾದ್ಯಂತ ಏ,9 ರ ಗುರುವಾರ ಮದ್ಯಾಹ್ನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು 2025-26ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 162 ವಿದ್ಯಾರ್ಥಿಗಳಲ್ಲಿ 159 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ 72 ಉನ್ನತ ಶ್ರೇಣಿ, 80 ಪ್ರಥಮ ಶ್ರೇಣಿ, 7 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 98.44%, ವಾಣಿಜ್ಯ ವಿಭಾಗದಲ್ಲಿ 100 %ಹಾಗೂ ಕಲಾ ವಿಭಾಗದಲ್ಲಿ 92.86% ಫಲಿತಾಂಶ ಬಂದಿದ್ದು ಕಾಲೇಜಿನ ಒಟ್ಟಾರೆ ಫಲಿತಾಂಶ 98.15% ಆಗಿರುತ್ತದೆ.

ಕನ್ನಡದಲ್ಲಿ 3, ಸಂಸ್ಕೃತದಲ್ಲಿ 8, ಇತಿಹಾಸದಲ್ಲಿ 1,ವ್ಯವಹಾರ ಅಧ್ಯಯನದಲ್ಲಿ 3, ರಾಜ್ಯಶಾಸ್ತçದಲ್ಲಿ 1, ಲೆಕ್ಕಶಾಸ್ತçದಲ್ಲಿ 2, ಗಣಿತದಲ್ಲಿ 4, ಗಣಕ ವಿಜ್ಞಾನದಲ್ಲಿ 2 ವಿದ್ಯಾರ್ಥಿಗಳು ಸೇರಿ ಒಟ್ಟು 24 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದಿರುತ್ತಾರೆ. ಕಾಲೇಜಿನಲ್ಲಿ 15 ವಿಷಯಗಳನ್ನು ಬೋಧಿಸುತ್ತಿದ್ದು 13 ವಿಷಯ ದಲ್ಲಿ 1೦೦ಕ್ಕೆ 1೦೦ ಫಲಿತಾಂಶ ಬಂದಿರುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿರುತ್ತಾರೆ.


ಸಂಸ್ಥೆಯ ಅಧ್ಯಕ್ಷರಾದ ರವಿಕುಮಾರ ಲಕ್ಷ್ಮಣ ಶಾನಭಾಗ , ಉಪಾಧ್ಯಕ್ಷ ಪ್ರಸನ್ನ ಗುಡಿಗಾರ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಭಟ್ಟ ಹಾಗೂ ಸಂಸ್ಥೆಯ ಎಲ್ಲಾ ಸದಸ್ಯರೂ, ಪ್ರಾಂಶುಪಾಲ ಆನಂದ ಹೆಗಡೆ ಮತ್ತು ಎಲ್ಲಾ ಉಪನ್ಯಾಸಕ, ಶಿಕ್ಷಕ ವರ್ಗದವರೂ ಹಾಗೂ ಶಿಕ್ಷಕೇತರ ಸಿಬ್ಬಂದಿಗಳೂ ಸಂಸ್ಥೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನೂ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ” ಹಿಂದು ಮುಖಂಡ ಸೋಮೇಶ್ವರ ನಾಯ್ಕ್ ಗೆ ಒಪ್ಪುವಂತಹ ಸಾಲುಗಳು.

ಪ್ರತಿಧ್ವನಿ ಯಲ್ಲಾಪುರ : ಸೇವಾ ಭಾವದಲ್ಲಿ ಸಮಾಜಕ್ಕಾಗಿ ಶ್ರಮಿಸುವ ಮತ್ತು ಸಮಾಜದ ಒಳಿತಿಗಾಗಿ ಸದಾ ಮಿಡಿವ ಮನಸ್ಸುಗಳಲ್ಲಿ ಯಲ್ಲಾಪುರದ ಹಿಂದು …

Leave a Reply

Your email address will not be published. Required fields are marked *