Breaking News

ಯಲ್ಲಾಪುರದಲ್ಲಿ ಆಧಾರ್ ಮೇಳ, ಹರಿದು ಬಂದ ಜನಸಾಗರ, ಅಂಚೆ ಇಲಾಖೆಯ ಯಶಸ್ವಿ ಕಾರ್ಯ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಆಧಾರ್ ಕಾರ್ಡ್ ಮೇಳ ಆಯೋಜಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಈ ಮೇಳದ ಕುರಿತು ಸಾಮಾಜಿಕ ಜಾಲತಣದಲ್ಲಿ ವ್ಯಾಪಕ ಪ್ರಚಾರ ನಡೆದ ಹಿನ್ನೆಲೆಯಲ್ಲಿ ಪಟ್ಟಣದ ಶಿರಸಿ ರಸ್ತೆ ಯಲ್ಲಿರುವ ಅಂಚೆ ಇಲಾಖೆ ಮುಂಬಾಗ ಜನಸಾಗರದಿಂದ ತುಂಬಿಹೋಗಿತ್ತು.


ದೇಶದ ಪ್ರಜೆಗಳ ಅತಿ ಪ್ರಾಮುಖ್ಯ ಗುರುತಿನ ಪತ್ರ ಆಧಾರ್ ಕಾರ್ಡ್ ನಿತ್ಯ ಜೀವನದ ಎಲ್ಲಾ ಕೆಲಸ ಕಾರ್ಯಗಳಿಗೆ ಪ್ರಾಮುಖ್ಯತೆ ಪಡೆದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಅದರಲ್ಲಿನ ಕೆಲವು ನ್ಯೂನ್ಯತೆ ಸರಿಪಡಿಸಲು, ದೂರವಾಣಿ ಸಂಖ್ಯೆ ಬದಲಿಸಲು, ವಿಳಾಸ ಬದಲವಣೆ, ಮಕ್ಕಳಿಗೆ ಹೊಸ ಆಧಾರ್ ಕಾರ್ಡ್ ಮಾಡಿಸುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಈ ಮೇಳ ಅನುಕೂಲಕರವಾಗಿತ್ತು.


ಜೂನ್ 8,9,10 ಮೂರು ದಿನಗಳ ಕಾಲ ಮೇಳ ನಡೆಯುತ್ತಿದ್ದು ಪ್ರತಿನಿತ್ಯ ಕನಿಷ್ಠ 160 ಜನರ ಆಧಾರ್ ಸಮಸ್ಯೆ ಬಗೆಹರಿಸುವ ಗುರಿ ಹೊಂದಲಾಗಿದೆ. ಅಂಚೆ ಕಚೇರಿಯಲ್ಲಿ ಇದಕ್ಕಾಗಿ 4 ಮಂದಿ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸ್ಪಂಧಿಸುತ್ತಾರೆಂದು ಅಂದುಕೊಂಡಿರಲಿಲ್ಲ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮೇಳ ಮುಗಿದ ನಂತರವು ಮೇಲಾಧಿಕಾರಿಗಳಿಗೆ ಮನವಿ ಮಾಡಿ ಮತ್ತಷ್ಟು ದಿನ ಮುಂದುವರೆಸಲು ಕೋರಲಾಗುವುದು – ಸುಶಾಂತ್ ಡಿ ಭಂಡಾರಿ, ಆಧಾರ್ ಕಾಡ್೯ ಅಧಿಕಾರಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *