Breaking News

ಭೀಕರ ಅಪಘಾತ ; ವ್ಯಕ್ತಿ ಪ್ರಾಣಾಪಾಯದಿಂದ ಪಾರು; ನುಜ್ಜುಗುಜ್ಜಾದ ಕಾಲು…


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ನೂತನ ಆಡಳಿತ ಸೌಧದ ಮುಂಭಾಗದಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟಿçÃಯ ಹೆದ್ದಾರಿಯ ಮೇಲೆ ಲಾರಿಯೊಂದು ವ್ಯಕ್ತಿಯೋರ್ವನ ಕಾಲಿನ ಮೇಲೆ ಹರಿದು ಕಾಲು ಮುರಿದುಹೋದÀ ಘಟನೆ ನಡೆದಿದೆ.
ಪಟ್ಟಣದ ಹೆಸರಾಂತ ಹೊಟೆಲ್ ಗೀತಾ ಭವನದ ಮಾಲೀಕರ ಮಗನಾದ ಶ್ರೀನಿವಾಸ ಕೃಷ್ಣ ಭಾಗ್ವತ (೪೬) ಎಂಬಾತನೇ ಅಪಘಾತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ. ಈತ ನೂತನವಾಗಿ ನಿರ್ಮಿಸಲಾಗಿರುವ ತಹಸೀಲ್ದಾರರ ಕಚೇರಿ ಮುಂಭಾಗದಲ್ಲಿ ತನ್ನ ಸ್ಕೂಟಿಯಲ್ಲಿ ಚಲಿಸುವ ವೇಳೆ ಹಿಂದಿನಿAದ ಬಂದ ಲಾರಿಯೊಂದು ಸ್ಕೂಟಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಶ್ರೀನಿವಾಸನ ಎಡಗಾಲಿಗೆ ಬಾರೀ ಗಾಯಗೊಂಡು ಸ್ಕೂಟಿ ಜಖಂಗೊAಡಿದೆ. ತಕ್ಷಣ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕ ಬೆಳಗಾವಿ ಸವದತ್ತಿ ತಾಲೂಕಿನ ಗುಡುಮಕೇರಿ ನಿವಾಸಿ ಪಕೀರಸ್ವಾಮಿ ಎಂಬುವನ ಮೇಲೆ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *