Breaking News

ಯಲ್ಲಾಪುರ ತಾಲೂಕಿನ ಡೊಮಗೇರಿ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ – ಮನವಿಗು ಕಿಮ್ಮತ್ತಿಲ್ಲ – ನಾಗರಾಜ್ ಗೊಂದಳಿ,ಸ್ಥಳೀಯ ಪ್ರಮುಖ.

ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಡೊಮಗೇರಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ BSNL ಮೊಬೈಲ್ ನೆಟ್ವರ್ಕ್ ತೀವ್ರ ಸಮಸ್ಯೆ ಉಂಟಾಗಿದೆ. ಈ ಕುರಿತು ಯಲ್ಲಾಪುರ BSNL ಕಚೇರಿಗೆ ಹಲವಾರು ಬಾರಿ ದೂರು ನೀಡಿದ್ದರೂ, ಇಂದಿನವರೆಗೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ.

ಇತರೆ ಯಾವುದೇ ನೆಟ್ವರ್ಕ್ ಗಳೂ ಸಹ ಇಲ್ಲಿ ಲಭ್ಯವಿಲ್ಲ.

ಗ್ರಾಮದ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳು, ಪರೀಕ್ಷೆಗಳು ಹಾಗೂ ಅಧ್ಯಯನಕ್ಕೆ ಬೇಕಾದ ಮಾಹಿತಿಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಉದ್ಯೋಗದಲ್ಲಿರುವವರು ಆನ್‌ಲೈನ್ ಸಭೆಗಳಲ್ಲಿ ಭಾಗವಹಿಸಲು ಆಗುತ್ತಿಲ್ಲ. ತುರ್ತು ಕರೆಗಳು, UPI ವಹಿವಾಟುಗಳು ಹಾಗೂ ಸರ್ಕಾರಿ ಸೇವೆಗಳನ್ನು ಬಳಸುವುದಕ್ಕೂ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಅತ್ಯಂತ ವಿಷಾದದ ಸಂಗತಿಯೆಂದರೆ, ಈ ಸಮಸ್ಯೆಯ ಬಗ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ BSNL ಅಧಿಕಾರಿಗಳು ಜವಾಬ್ದಾರಿಯಿಂದ ಸ್ಪಂದಿಸುತ್ತಿಲ್ಲ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬರುತ್ತಿದೆ. ಒಂದು ತಿಂಗಳಿನಿಂದ ಸಮಸ್ಯೆ ಮುಂದುವರಿದಿದ್ದರೂ, ಅಧಿಕಾರಿಗಳಿಂದ ಸ್ಪಷ್ಟ ಉತ್ತರ ಅಥವಾ ಪರಿಣಾಮಕಾರಿ ಕ್ರಮ ಕಾಣುತ್ತಿಲ್ಲ.

ಡೊಮಗೇರಿ ಗ್ರಾಮದ ಮಕ್ಕಳು ಸರಿಯಾಗಿ ಶಿಕ್ಷಣ ಪಡೆಯದಿದ್ದರೆ ಅದರ ಜವಾಬ್ದಾರಿ ಯಾರದು? ಗ್ರಾಮೀಣ ಜನರು ಮೂಲಭೂತ ಸಂಪರ್ಕ ಸೌಲಭ್ಯಕ್ಕಾಗಿ ಇನ್ನೆಷ್ಟು ದಿನ ಕಾಯಬೇಕು?

ಸಂಬಂಧಪಟ್ಟ BSNL ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ, ಡೊಮಗೇರಿ ಗ್ರಾಮದ BSNL ನೆಟ್ವರ್ಕ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬೇಕು ಎಂದು ಗ್ರಾಮಸ್ಥರ ಪರವಾಗಿ ವಿನಂತಿಸಿಕೊಳ್ಳುತ್ತೇವೆ. ಸಾರ್ವಜನಿಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ. ಎಂದು ಗುತ್ತಿಗೆದಾರ ಸ್ಥಳೀಯ ಪ್ರಮುಖ ನಾಗರಾಜ್ ಗೊಂದಳಿ ಆಗ್ರಹಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *