Breaking News

ಯಲ್ಲಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಖ್ಯಾತ ಅಭಿನೇತ್ರಿ ಯಮುನಾ ಶ್ರೀನಿಧಿ ಭೇಟಿ.

ಪ್ರತಿಧ್ವನಿ ಯಲ್ಲಾಪುರ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಯಲ್ಲಾಪುದಲ್ಲಿ ಎನ್ ಸಿ ಸಿ ಅಸೋಸಿಯೇಷನ್ ವತಿಯಿಂದ ಸಾಫ್ಟ್ ಸ್ಕಿಲ್ಸ್ ಡೆವಲಪ್ಮೆಂಟ್ ಕಾರ್ಯಕ್ರಮದಡಿ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ncc ಅಲ್ಯುಮಿನಿ ಅಸೋಸಿಯೇಷನ್ ನ ಅಭ್ಯರ್ಥಿ  ಯಮುನಾ ಶ್ರೀನಿಧಿ ( ಅಂತರಾಷ್ಟ್ರೀಯ ಕಲಾವಿದರು ಹಾಗೂ ಖ್ಯಾತ ಅಭಿನೇತ್ರಿ)ಅವರು ಹಾಗೂ ಇನ್ನೋರ್ವ ಅಭ್ಯರ್ಥಿ  ಗೌತಮ್ ಎಚ್ ಜಿ (ಸಿವಿಲ್ ಡಿಫೆನ್ಸ್ ಬೆಂಗಳೂರು ಇದರ ಕಮಾಂಡಿಂಗ್ ಆಫೀಸರ್)ಇವರು ಉಪನ್ಯಾಸಕರಾಗಿದ್ದು  ಹರಿಪ್ರಸಾದ್ ದೇಸಾಯಿ(ಉಪನ್ಯಾಸಕರು ಜಿಸಿ ಕಾಲೇಜ್ ಅಂಕೋಲಾ) ಇವರು ಉಪಸ್ಥಿತರಿದ್ದರು.


ಈ ಕಾರ್ಯಕ್ರಮದಲ್ಲಿ ವಸತಿ ಶಾಲೆಯ ಪ್ರಾಂಶುಪಾಲರಾದ  ಸಂಜಯ್ ನಾಯಕ್ ಇವರು ಅತಿಥಿಗಳಾಗಿದ್ದು ncc ಘಟಕದ ANO ಆಗಿರುವ ಫಸ್ಟ್ ಆಫೀಸರ್ ಶಿಲ್ಪ ಪ್ರಭು ಇವರು ಕಾರ್ಯಕ್ರಮ ನಡೆಸಿಕೊಟ್ಟರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *