Breaking News

ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕೊಳೆ ರೋಗ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆಯಿಂದ ಸಹಾಯಧನ ವಿತರಣೆ,

ಪ್ರತಿಧ್ವನಿ ಯಲ್ಲಾಪುರ : ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕೊಳೆ ರೋಗ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆಯಿಂದ ಸಹಾಯಧನ ವಿತರಿಸಲಾಗುತ್ತಿದೆ.

2026-27 ಸಾಲಿನಲ್ಲಿ ಅಡಿಕೆ ಬೆಳೆಗಾರರಿಗೆ ಎಲೆಚುಕ್ಕೆ ರೋಗ ಮತ್ತು ಕೊಳೆ ರೋಗ ನಿರ್ವಹಣೆಗಾಗಿ  ಈಗಾಗಲೇ ಕೇಂದ್ರ ನೆರವಿನ ಯೋಜನೆಯಾದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಘಟಕವಾದ ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ/ಕೀಟ ನಿಯಂತ್ರಣ ಕಾರ್ಯಕ್ರಮದಡಿ ಸಸ್ಯ ಸಂರಕ್ಷಣಾ ಔಷಧಿ ಖರೀದಿಗಾಗಿ ರೂ. 5೦೦೦ ಘಟಕ ವೆಚ್ಚಕ್ಕೆ ಶೇ.3೦ ರಂತೆ ಪ್ರತಿ ಹೆ. ಗೆ ರೂ.15೦೦ ಗಳಂತೆ ಫಲಾನುಭವಿಗೆ ಗರಿಷ್ಠ 2 ಹೆ. ವರೆಗೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗುತ್ತಿದೆ.

ಸದರಿ ಫಲಾನುಭವಿಗಳಿಗೆ ರಾಜ್ಯ ವಲಯ ಯೋಜನೆಯಾದ ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಹೆಚ್ಚುವರಿ  ಸಹಾಯಧನವನ್ನು ಪ್ರತಿ ಹೆಕ್ಟೇರಿಗೆ ರೂ.15೦೦ ರುಪಾಯಿ ನೀಡಲು ಅವಕಾಶವಿದ್ದು, ಒಟ್ಟಾರೆ  ಫಲಾನುಭವಿಗೆ ಸಸ್ಯ ಸಂರಕ್ಷಣಾ ಔಷಧಿ ಖರೀದಿಗಾಗಿ ರೂ. 5೦೦೦ ಘಟಕ ವೆಚ್ಚಕ್ಕೆ ಶೇ.6೦ ರಂತೆ ಪ್ರತಿ ಹೆ. ಗೆ ರೂ.3೦೦೦/- ಗಳಂತೆ ಗರಿಷ್ಠ 2 ಹೆ. ವರೆಗೆ ಸಹಾಯಧನ ನೀಡಲಾಗುವುದು. ರೈತರು ತಾವು ಖರೀದಿಸಿದ ಸಸ್ಯ ಸಂರಕ್ಷಣಾ ಔಷಧಿಯ (Tax invoice ) ರಶೀದಿ ಹಾಗೂ ಅರ್ಜಿ ಯನ್ನು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಯಲ್ಲಾಪುರ ರವರ ಕಛೇರಿಗೆ ಸಲ್ಲಿಸಿ ಈ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಬಹುದಾಗಿದೆ ಎಂದು ಇಲಾಖೆವಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ರೈತರು ಕಾರ್ಯಪ್ರವೃತ್ತರಾಗಬೇಕಿದ್ದು ಸರ್ಕಾರದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *