

ಪ್ರತಿಧ್ವನಿ ಯಲ್ಲಾಪುರ : ಅಂತಾರಾಷ್ಟ್ರೀಯ ಮಾದಕ ಪದಾರ್ಥಗಳ ಬಳಕೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯ ಪ್ರಯುಕ್ತ ಯಲ್ಲಾಪುರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪೊಲೀಸ್ ವತಿಯಿಂದ ” ಅಂತರಾಷ್ಟ್ರೀಯ ಮಾದಕ ದ್ರವ್ಯ ಗಳ ಸೇವನೆ ಹಾಗೂ ಸಾಗಾಣಿಕೆ ನಿಷೇದ ಮತ್ತು ಬಳಿಕೆಯಿಂದ ಆಗುವ ದುಷ್ಪರಿಣಾಮ ” ದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ಪಾಲ್ಗೊಂಡ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಶ್ವಿನಿ ಗಾಂವ್ಕರ್ ಪ್ರಥಮ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಐಶ್ವರ್ಯ ನಾಯ್ಕ್,ಕಾವ್ಯ ಪಟಗಾರ ದ್ವಿತೀಯ ಸ್ಥಾನ ಪಡೆದರೆ,ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಾನ್ಸಿ ಬಾಂದೇಕರ್ ತೃತೀಯ ಸ್ಥಾನ ಪಡೆದರು ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಿಎಸ್ಐ ರಾಜೇಶೇಕರ ವಂದಲಿ ಬಹುಮಾನ ವಿತರಿಸಿದರು.

ಇದೇ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಸೇವನೆ ಹಾಗೂ ಸಾಗಾಣಿಕೆಯಿದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಕಾಲೇಜು ಉಪನ್ಯಾಸಕರು,ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.







Prathidvani Yellapura