ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಯಲ್ಲಾಪುರ, ಏಪ್ರಿಲ್ 12 : ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು, ಇಂದು ಯಲ್ಲಾಪುರ ತಾಲೂಕಿನ ಹಾಸಣಗಿ ಹಾಗೂ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಮತ್ತೊಮ್ಮೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಟಿಕೆಟ್ ನೀಡಿದೆ. ಇದಕ್ಕಾಗಿ ಪಕ್ಷದ ನಾಯಕರು, ಕಾರ್ಯಕರ್ತರು, ಎಲ್ಲ ಸ್ತರದ ಮುಖಂಡರು, ಮತದಾರರು ಹಾಗೂ ಬೆಂಬಲಿಗರಿಗೆ ನಾನು ಆಭಾರಿ. ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವಿಗೆ ನಾವೆಲ್ಲ ದುಡಿಯೋಣ. ಎಲ್ಲೆಡೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಮಂಡಲಾಧ್ಯಕ್ಷರು, ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

Prathidvani Yellapura