Breaking News

ಎಸ್ಐಆರ್ ಕರ್ತವ್ಯದಲ್ಲಿರುವ ಶಿಕ್ಷಕರ ಮೇಲಿನ ಒತ್ತಡ – ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಂಡನೆ.

ಪ್ರತಿಧ್ವನಿ ಯಲ್ಲಾಪುರ – ಸುರಿಯುತ್ತಿರುವ ಮಳೆ,ಗುಡ್ಡಗಾಡು ಪ್ರದೇಶಗಳಲ್ಲಿರುವ ಮನೆಗಳು ಸಾಕಷ್ಟು ಶ್ರಮ ವಹಿಸಿ ಎಸ್ಐಆರ್ ಕರ್ತವ್ಯದಲ್ಲಿ ಶಿಕ್ಷಕರು ಹೈರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಅಧಿಕಾರಿಗಳು ಮತ್ತೂ ಒತ್ತಡ ಹೇಉತ್ತಿರುವ ದೂರುಗಳು ಸಂಘದ ಗಮನಕ್ಕೆ ತರುತ್ತಿದ್ದು ಇಂತಹ ನಡೆಯನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಖಂಡಿಸುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಯಲ್ಲಾಪುರ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.

  ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷ  ಆರ್ ಆರ್ ಭಟ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಂಜೀವ್ ಕುಮಾರ್ ಹೊಸ್ಕೇರಿ ಹಾಗು ಪ್ರಮುಖರಾದ ಸತೀಶ್ ನಾಯಕ, ಮಾರುತಿ ನಾಯ್ಕ್, ವಿಶಾಲ ನಾಯಕ,  ವಿನಾಯಕ ಗಾಂವಕರ್,  ಪವನ್ ಕುಮಾರ, ಅಮಿತ್ ಚೌಹಾಣ್  ಗಣಪತಿ ಪಟಗಾರ, ಉದಯ ದೇವಾಡಿಗ ಇನ್ನಿತರ ಶಿಕ್ಷಕರು ಉಪಸ್ಥಿತರಿದ್ದರು. ತಹಶೀಲ್ದಾರರ ಅನುಪಸ್ಥಿತಿಯಲ್ಲಿ ಅವರ ಪರವಾಗಿ ಪಿ . ವೈ ಕಾಮರೆಡ್ಡಿ ಶೀರಸ್ತೆದಾರರು ಮನವಿಯನ್ನು ಸ್ವೀಕರಿಸಿದರು.

 

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *