Breaking News

ಯಲ್ಲಾಪುರ ಆರ್ತಿ ಬೈಲ್ ಘಟ್ಟದಲ್ಲಿ ಭೀಕರ ಅಪಘಾತ ಸ್ಥಳದಲ್ಲೇ 5 ಜನರ ಸಾವು


ಪ್ರತಿಧ್ವನಿ,ಯಲ್ಲಾಪುರ – ತಾಲೂಕಿನ ಆರ್ತಿ ಬೈಲ್ ಘಟ್ಟದಲ್ಲಿ ಗುರುವಾರ ಮುಂಜಾನೆ ಲಾರಿ ಮತ್ತು ಟ್ರಾಕ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ತೆರಳುತ್ತಿದ್ದ 5 ಜನ ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಉಳಿದ ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ 26 ರಿಂದ 30 ವರ್ಷದ ವಯಸ್ಸಿನ ಹುಡುಗರು ಧಾರವಾಡ ದಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಎಂದು ತೆರಳುವ ಸಂದರ್ಭದಲ್ಲಿ ಆರತಿ ಬೈಲ ಹತ್ತಿರ 2-30 ರ ಸುಮಾರಿಗೆ ಟುಪಾನ್ (ಟ್ಯಾಕ್ಸ) ಮತ್ತು ಲಾರಿ ಮದ್ಯ ಅಪಘಾತವಾಗಿದೆ. ಟುಪಾನ್ ನಲ್ಲಿ 09 ಜನ ಪ್ರಯಾಣಿಸುತ್ತಿದ್ದು ಸ್ಥಳದಲ್ಲಿ 05 ಜನರು ಮರಣ ಹೊಂದಿದ್ದಾರೆ ಇನ್ನೂ ಉಳಿದ 04 ಜನರನ್ನು ಯಲ್ಲಾಪುರ ಆಸ್ಪತ್ರೆಗೆ ಕರೆತಂದು ಬಂದು ಪ್ರಾಥಮಿಕ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಗೆ ರವಾನಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಡಿವೈಎಸ್ಪಿ ಗೀತಾ ಪಾಟೀಲ, ಯಲ್ಲಾಪುರ ಪಿ.ಐ.ರಮೇಶ್ ಹಾನಾಪುರ ಹಾಗು ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈ ಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ದೊರೆಯಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಸರಕ್ಕು ಪೂರಕ ಮನಸ್ಸಿಗು ನೆಮ್ಮದಿ  ಹೂ ಮತ್ತು ಹಣ್ಣಿನಗಿಡಗಳ ಪೋಷಣೆ – ಹಿಮವತಿ ಭಟ್ಟ..

ಪ್ರತಿಧ್ವನಿ ಯಲ್ಲಾಪುರ : ಪ್ರತಿಯೊಬ್ಬರ ಮನೆಗಳಲ್ಲಿ ಹೂವು, ಹಣ್ಣಿನ ಗಿಡಗಳನ್ನು ಬೆಳೆಸುವ ಅಭ್ಯಾಸ ಶ್ರೇಷ್ಠವಾದದ್ದು. ಅದನ್ನು ಪ್ರತಿಯೊಬ್ಬ ಮಹಿಳೆಯರೂ ರೂಢಿಸಿಕೊಳ್ಳಬೇಕು. …

Leave a Reply

Your email address will not be published. Required fields are marked *