Breaking News

ಪ್ರತಿಧ್ವನಿ ಸುದ್ದಿ ಫಲಶೃತಿ  ಯಲ್ಲಾಪುರ-ಹಳಿಯಾಳ ರಸ್ತೆ ತಾತ್ಕಾಲಿಕ ದುರಸ್ತಿ ಆರಂಭ.


ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ-ಹಳಿಯಾಳ ರಾಜ್ಯ ರಸ್ತೆ ಅತ್ಯಂತ ಧಾರುಣ ಸ್ಥಿತಿ ತಲುಪಿರುವ ಕುರಿತು ಪ್ರತಿಧ್ವನಿ ಯಲ್ಲಾಪುರ ವೆಬ್ ಶುಕ್ರವಾರ ಸುದ್ದಿ ಪ್ರಕಟಿಸಿತ್ತು.


ಸುದ್ದಿ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ತಾತ್ಕಾಲಿಕ ದುರಸ್ತಿ ಆರಂಭಗೊಂಡಿದ್ದು ಸಾರ್ವಜನಿಕ ಹಿತ ದೃಷ್ಟಿಯಿಂದ ಸುದ್ದಿ ಮಾಡಿದ್ದ ಪ್ರತಿಧ್ವನಿ ಗೆ ಸಮಾಧಾನ ತಂದಿದೆ.


ಸುದ್ದಿ ಪ್ರಕಟಿಸಿದ ಕೂಡಲೆ ಕಾರ್ಯ ಪ್ರವೃತ್ತರಾದರು ಎಂಬ ಸಂತಸಕ್ಕಿಂತ ರಸ್ತೆ ಪರಿಸ್ಥಿತಿ ಕಂಡು ಮತ್ಯಾರಿಗು ಅವಘಡ ಸಂಭವಿಸವಾರದು ಎಂಬ ದೊಡ್ಡತನ ತೋರಿ ದುರಸ್ತಿಗೆ ಮುಂದಾದ ಯಲ್ಲಾಪುರ ಲೋಕೋಪಯೋಗಿ ಇಲಾಖೆ ಎಇಇ ರಾಮಲಿಂಗ್ ಅವರ ಬದ್ದತೆಗೆ ಪ್ರತಿಧ್ವನಿ ವಂದಿಸುತ್ತದೆ.


ಸದ್ಯ ಮಳೆ ವಾತಾವರಣದಲ್ಲಿ ಸಂಪೂರ್ಣ ಸರಿಯಾಗದಿದ್ದರು ಕನಿಷ್ಟ ಅನಾಹುತ ಆಗದ ರೀತಿಯಲ್ಲಿ ದುರಸ್ತಿ ಆದರು ಸಹ ಒಳ್ಳೆಯ ಕಾರ್ಯವಾದಂತಾಗಲಿದೆ. ಪ್ರತಿಧ್ವನಿ ಯಲ್ಲಾಪುರ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *