Breaking News

ಯಲ್ಲಾಪುರ ಪೊಲೀಸರಿಂದ “ಏರಿಯಾ ಡಾಮಿನೇಷನ್” ಕಾರ್ಯಾಚರಣೆ

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಯಲ್ಲಾಪುರ ಪೊಲೀಸರಿಂದ ‌ ” ಏರಿಯಾ ಡಾಮಿನೇಷನ್ ” ಕಾರ್ಯಾಚರಣೆ ಯಶಸ್ವಿಯಾಗಿ ನಡೆಯಿತು.

ಪಟ್ಟಣದ ಪ್ರಮುಖ ರಸ್ತೆಯಲ್ಲಿ, ಬೀದಿಗಳಲ್ಲಿ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶನಿವಾರ ಸಂಯುಕ್ತ ಕಾರ್ಯಾಚರಣೆ ನಡೆಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಮತ್ತು ಅಪರಾಧಿಗಳಲ್ಲಿ ಭಯ ಹುಟ್ಟಿಸುವ ಕಾರ್ಯ ಮಾಡಲಾಯಿತು. 

  

ಸಾರ್ವಜನಿಕರಲ್ಲಿ ಕಾನೂನು ಸುರಕ್ಷತೆಯ ವಿಶ್ವಾಸ ಸಮಾಜದಲ್ಲಿ ಶಾಂತಿ ನೆಲೆಸುವ ವಾತಾವರಣ, ನಾಗರಿಕರಲ್ಲಿ ಕಾನೂನಿನ ಪ್ರಜ್ಞಾವಂತಿಕೆ,  ಅಪರಾಧಗಳನ್ನು ತಡೆಯುವಲ್ಲಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವಲ್ಲಿ ಈ ಕಾರ್ಯಾಚರಣೆ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ ಎನ್ನುತ್ತಾರೆ ಹಿರಿಯ ಅಧಿಕಾರಿಗಳು.

ಪಿಎಸ್ಐ ಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬ್ಳೆ, ಎಎಸ್ಐ ಗಳು,ಪುರುಷ ಮತ್ತು ಮಹಿಳಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಹೆಜ್ಜೆ ಹಾಕಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *